ದೇವರ ಎದುರು ಕಾಲಮಿತಿ ಯಕ್ಷಗಾನ ಬಗ್ಗೆ ಹೂಪ್ರಶ್ನೆ ಇಟ್ಟಾಗ ಒಪ್ಪಿಗೆ ಬಂದಿದೆ. ಸಂಜೆ 5 ಗಂಟೆಯಿಂದ ರಾತ್ರಿ 10.30ರ ತನಕ ಯಕ್ಷಗಾನ ನಡೆಸುವ ಬಗ್ಗೆ ನಿರ್ಣಯಿಸಲಾಗಿದೆ.
ಪ್ರದರ್ಶನದ ಸ್ವರೂಪ ಚಿಂತನೆಗಳ ಬಗ್ಗೆ ಮುಂದೆ ನಿರ್ಧರಿಸಲಾಗುವುದು ಎಂದು ಕಟೀಲು ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷರಾದ ಆನುವಂಶಿಕ ಮೊಕ್ತೇಸರ ಕೊಡೆತ್ತೂರು ಗುತ್ತು ಸನತ್ ಕುಮಾರ ಶೆಟ್ಟಿ ಹಾಗೂ ಆನುವಂಶಿಕ ಮೊಕ್ತೇಸರ ಮತ್ತು ಅರ್ಚಕ ವಾಸುದೇವ ಆಸ್ರಣ್ಣ ತಿಳಿಸಿದ್ದಾರೆ.