ಹಿಜಾಬ್ ಪ್ರಕರಣವನ್ನು ಹೆಚ್ಚಿನ ವಿಚಾರಣೆಗೆ ಸೆಪ್ಟೆಂಬರ್ 5ಕ್ಕೆ ಮುಂದೂಡಲಾಗಿದೆ. ಹಿಜಾಬ್ ಅತ್ಯಗತ್ಯ ಅಭ್ಯಾಸವಲ್ಲ ಎಂದು ತೀರ್ಪು ನೀಡಿದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋಟ್್ನಲ್ಲಿ ಮೇಲ್ಮನವಿಗಳನ್ನು ಸಲ್ಲಿಸಲಾಗಿದೆ.
ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ಎತ್ತಿ ಹಿಡಿದಿರುವ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಆರಂಭಿಸಿದ್ದು, ಭಾರತದ ಹೊಸ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ನೇತೃತ್ವದ ಪೀಠ ಅರ್ಜಿ ವಿಚಾರಣೆ ನಡೆಸಿದೆ. ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಪೀಠದಲ್ಲಿದ್ದಾರೆ.
ಹಿಜಾಬ್ ಧರಿಸುವುದು ಸಂವಿಧಾನದ 25ನೇ ವಿಧಿಯ ಅಡಿಯಲ್ಲಿ ರಕ್ಷಿಸಬಹುದಾದ ಅತ್ಯಗತ್ಯ ಧಾರ್ಮಿಕ ಆಚರಣೆಯ ಭಾಗ ವಲ್ಲ ಎಂಬ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ಹಲವಾರು ಅರ್ಜಿಗಳು ಸಲ್ಲಿಕೆಯಾಗಿವೆ.
ಉನ್ನತ ನ್ಯಾಯಾಲಯದಲ್ಲಿ ಸಲ್ಲಿಕೆಯಾಗಿರುವ ಮೇಲ್ಮನವಿಗಳಲ್ಲಿ ಒಂದು “ಸರಕಾರಿ ಅಧಿಕಾರಿಗಳ ಮಲತಾಯಿ ವರ್ತನೆಯು ವಿದ್ಯಾರ್ಥಿಗಳ ನಂಬಿಕೆಯ ಮೇಲೆ ಕೆಟ್ಟ ಪರಿಣಾ ಬೀರುತ್ತದೆ ಮತ್ತು ಅನಗತ್ಯ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಗೆ ಕಾರಣವಾಗುತ್ತದೆ” ಎಂದು ಆರೋಪಿಸಿದೆ.
ಕರ್ನಾಟಕ ಹೈಕೋರ್ಟ್ ಮಾರ್ಚ್ನಲ್ಲಿ, ಸಮವಸ್ತ್ರದ ಆದೇಶ ಸಮಂಜಸ ವಾದ ನಿರ್ಬಂಧವಾಗಿದೆ ಎಂದು ಹೇಳಿತ್ತು. ಜೊತೆಗೆ ಇದಕ್ಕೆ ವಿದ್ಯಾರ್ಥಿಗಳು ಆಕ್ಷೇಪಿಸುವಂತಿಲ್ಲ ಎಂದು ತೀರ್ಪು ನೀಡಿ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು ಪ್ರಶ್ನಿಸಿದ್ದ ವಿವಿಧ ಅರ್ಜಿಗಳನ್ನು ವಜಾಗೊಳಿಸಿದೆ.
ರಾಜ್ಯದಲ್ಲಿ ಈ ವರ್ಷದ ಜನವರಿಯಲ್ಲಿ ಉಡುಪಿಯ ಸರ್ಕಾರಿ ಪಿಯು ಕಾಲೇಜು ಹಿಜಾಬ್ ಧರಿಸಿದ ಆರು ಹುಡುಗಿಯರನ್ನು ಪ್ರವೇಶಿಸದಂತೆ ನಿರ್ಬಂಧಿಸಿದಾಗ ಹಿಜಾಬ್ ವಿವಾದ ಸ್ಫೋಟಗೊಂಡಿತ್ತು. ಈ ಹಿನ್ನೆಲೆಯಲ್ಲಿ ಕಾಲೇಜು ಪ್ರವೇಶ ನಿರಾ ಕರಿಸಿದ್ದಕ್ಕೆ ಮುಸ್ಲಿಂ ಬಾಲಕಿಯರು ಕಾಲೇಜಿನ ಹೊರಗೆ ಕುಳಿತು ಪ್ರತಿಭಟನೆ ನಡೆಸಿದರು.