Sunday, 24th November 2024

5,910 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ

ವದೆಹಲಿ: ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆ ಕೊಂಚ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 5,910 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಮಹಾಮಾರಿಗೆ ದೇಶದಲ್ಲಿ ಈವರೆಗೆ 528007 ಜನರು ಮೃತಪಟ್ಟಿದ್ದಾರೆ. ಇನ್ನು ದೇಶದಲ್ಲಿ 53974 ಕೋವಿಡ್ ಸಕ್ರಿಯ ಪ್ರಕರಣ ಗಳಿದ್ದು, ಶೇ.98.68ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 43880464 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ದೇಶದಲ್ಲಿ ಈವರೆಗೆ 2,13,52,74,945 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 32,31,895 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.