Saturday, 23rd November 2024

ಬಾಂಗ್ಲಾದೇಶ ಪ್ರಧಾನಿ ನಾಲ್ಕು ದಿನಗಳ ಭಾರತ ಪ್ರವಾಸ ಆರಂಭ

ವದೆಹಲಿ: ಬಾಂಗ್ಲಾದೇಶ ಪ್ರಧಾನಮಂತ್ರಿ ಶೇಕ್ ಹಸೀನಾ ಸೋಮವಾರ ದಿಂದ ನಾಲ್ಕು ದಿನಗಳ ಕಾಲ ಭಾರತ ಪ್ರವಾಸ ಕೈಗೊಂಡಿದ್ದು, ನವದೆಹಲಿಗೆ ಬಂದಿಳಿದಿದ್ದಾರೆ.

ಶೇಕ್ ಹಸೀನಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್ ಸೇರಿದಂತೆ ದೇಶದ ಪ್ರಮುಖ ನಾಯಕರನ್ನು ಭೇಟಿಯಾಗಲಿದ್ದಾರೆ. ಈ ಸಂದರ್ಭದಲ್ಲಿ ಉಭಯ ದೇಶಗಳು ರೈಲ್ವೆ, ವಿಜ್ಞಾನ, ತಂತ್ರಜ್ಞಾನ ಸೇರಿದಂತೆ ಏಳು ಒಪ್ಪಂದಗಳಿಗೆ ಸಹಿ ಹಾಕಲಿವೆ.

2019ರ ಅಕ್ಟೋಬರ್ ನಲ್ಲಿ ಬಾಂಗ್ಲಾದೇಶ ಪ್ರಧಾನಿ ಹಸೀನಾ ಭಾರತಕ್ಕೆ ಭೇಟಿ ನೀಡಿದ್ದರು. ಗುರುವಾರ ಹಸೀನಾ ಅವರು ರಾಜಸ್ಥಾನದ ಅಜ್ಮೀರ್ ನಲ್ಲಿರುವ ಸೂಫಿ ಸಂತ ಮೊಯಿನುದ್ದೀನ್ ಚಿಸ್ತಿ ದರ್ಗಾಕ್ಕೆ ಭೇಟಿ ನೀಡಲಿದ್ದಾರೆ.

ಬಾಂಗ್ಲಾ ಪ್ರಧಾನಿ ಶೇಕ್ ಹಸೀನಾ ಅವರನ್ನು ರೈಲ್ವೆ ಮತ್ತು ಜವಳಿ ಖಾತೆಯ ರಾಜ್ಯ ಸಚಿವೆ ದರ್ಶನಾ ಜಾರ್ದೋಶ್ ಅವರನ್ನು ವಿಮಾನ ನಿಲ್ದಾಣದಲ್ಲಿ ಹೂಗುಚ್ಛ ನೀಡಿ ಸ್ವಾಗತಿಸಿದ್ದರು.