ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಣಿಪಾಲ್ ಸಮೂಹ ಸಂಸ್ಥೆಗಳ ಮೇಲೆ ದಾಳಿ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ನಗರದ 22 ಪ್ರದೇಶಗಳಲ್ಲಿ ಬುಧವಾರ ಬೆಳಗ್ಗೆ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. 45ಕ್ಕೂ ಅಧಿಕ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ಕಾರ್ಯದಲ್ಲಿ ತೊಡಗಿದ್ದಾರೆ.
ಬುಧವಾರ ದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಆರಂಭಿಸಿದ್ದಾರೆ. ಬೆಂಗಳೂರು ನಗರದ ಹೈ ಗ್ರೌಂಡ್ಸ್ ಪೊಲೀಸ್ ಠಾಣೆ ಬಳಿ ಇರುವ ಆಸ್ಪತ್ರೆ ಸೇರಿದಂತೆ ವಿವಿಧ ಕಡೆ ದಾಖಲೆಗಳ ಪರಿಶೀಲನೆ ಕಾರ್ಯ ನಡೆಯುತ್ತಿದೆ.