ಸಕ್ರಿಯ ಪ್ರಕರಣಗಳ ಸಂಖ್ಯೆ 50,594 ಕ್ಕೆ ಇಳಿಕೆಯಾಗಿದೆ. ಇದೇ ಅವಧಿಯಲ್ಲಿ ಕೇರಳ ದಲ್ಲಿ 11 ಜನರು ಸೇರಿದಂತೆ ದೇಶದಲ್ಲಿ 27 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ.
ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.11ರಷ್ಟು ಸಕ್ರಿಯ ಪ್ರಕರಣಗಳಿದ್ದರೆ, ರಾಷ್ಟ್ರೀಯ ಕೋವಿಡ್ ಚೇತರಿಕೆ ದರವು ಶೇ 98.70 ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.
24 ಗಂಟೆಗಳ ಅವಧಿಯಲ್ಲಿ 7,094 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಒಟ್ಟು 4,38,93,590 ಜನರು ಇದುವರೆಗೆ ಚೇತರಿಸಿಕೊಂಡಿದ್ದಾರೆ. ಈವರೆಗೆ 213.91 ಕೋಟಿ ಕೋವಿಡ್ ವಿರುದ್ಧದ ಲಸಿಕಾ ಡೋಸ್ಗಳನ್ನು ವಿತರಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.