Saturday, 23rd November 2024

ಇಂದು ಪಾಕಿಸ್ತಾನ ಗೆದ್ದರೆ ಫೈನಲಿಗೆ

ಶಾರ್ಜಾ: ಷ್ಯಾ ಕಪ್‌ನಲ್ಲಿ ಬುಧವಾರ ಪಾಕಿಸ್ತಾನ ಹಾಗೂ ಅಫ್ಘಾನಿಸ್ತಾನ ತಂಡಗಳು ಮುಖಾಮುಖಿಯಾಗಲಿದೆ.

ಪಾಕಿಸ್ತಾನ ಈ ಹಂತದ ಮೊದಲ ಪಂದ್ಯದಲ್ಲಿ ಭಾರತದ ವಿರುದ್ಧ ಗೆಲುವು ಸಾಧಿಸಿದ್ದು ಮೇಲುಗೈ ಹೊಂದಿದ್ದರೆ, ಅಫ್ಘಾನಿಸ್ತಾನ ಮೊದಲ ಸೂಪರ್ 4 ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಸೋಲು ಅನುಭವಿಸಿತ್ತು. ಹೀಗಾಗಿ ಈ ಪಂದ್ಯದಲ್ಲಿ ಅಪ್ಘಾನಿಸ್ತಾನ ತಂಡಕ್ಕೆ ಗೆಲುವು ಮಹತ್ವದ್ದಾಗಿದೆ.

ಈ ಪಂದ್ಯದಲ್ಲಿ ಅಫ್ಘಾನಿಸ್ತಾನ ಗೆಲ್ಲಲು ವಿಫಲವಾದರೆ ಪಾಕಿಸ್ತಾನ ತಂಡ ಫೈನಲ್ ಹಂತಕ್ಕೆ ಟಿಕೆಟ್ ಪಡೆದುಕೊಳ್ಳಲಿದೆ. ಹೀಗಾಗಿ ಭಾರತ ತಂಡಕ್ಕೂ ಇಂದಿನ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡ ಗೆಲ್ಲುವುದು ಬಹಳಷ್ಟು ಮಹತ್ವದ್ದಾಗಿದೆ. ಸೂಪರ್ 4 ಹಂತದಲ್ಲಿ ಭಾರತ ಸತತ ಎರಡು ಸೋಲು ಅನುಭವಿಸಿದ ಬಳಿಕ ಭಾರತದ ಈ ಸಂಕಷ್ಟಕ್ಕೆ ಸಿಲುಕಿ ಕೊಂಡಿದೆ.

ಅಫ್ಘಾನಿಸ್ತಾನ ಹಾಗೂ ಪಾಕಿಸ್ತಾನ ತಂಡಗಳು ಶಾರ್ಜಾ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಮುಖಾಮುಕಿಯಾಗಲಿದೆ.

ಸಂಭಾವ್ಯ ಆಡುವ ಬಳಗ

ಪಾಕಿಸ್ತಾನ: ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಬಾಬರ್ ಅಜಮ್ (ನಾಯಕ), ಫಖರ್ ಜಮಾನ್, ಇಫ್ತಿಕರ್ ಅಹ್ಮದ್, ಖುಷ್ದಿಲ್ ಶಾ, ಶಾದಾಬ್ ಖಾನ್, ಆಸಿಫ್ ಅಲಿ, ಮೊಹಮ್ಮದ್ ನವಾಜ್, ಹಾರಿಸ್ ರೌಫ್, ಮೊಹಮ್ಮದ್ ಹಸ್ನೈನ್, ನಸೀಮ್ ಶಾ

ಅಫ್ಘಾನಿಸ್ತಾನ: ಹಜರತುಲ್ಲಾ ಝಜೈ, ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಇಬ್ರಾಹಿಂ ಜದ್ರಾನ್, ಮೊಹಮ್ಮದ್ ನಬಿ (ನಾಯಕ), ನಜೀಬುಲ್ಲಾ ಜದ್ರಾನ್, ಕರೀಂ ಜನತ್, ರಶೀದ್ ಖಾನ್, ಸಮೀವುಲ್ಲಾ ಶಿನ್ವಾರಿ, ನವೀನ್-ಉಲ್-ಹಕ್, ಮುಜೀಬ್ ಉರ್ ರೆಹಮಾನ್, ಫಝಲ್ಹಕ್ ಫಾರೂಕಿ.