Monday, 25th November 2024

ಹಿರಿಯ ನಟಿ ಲೀಲಾವತಿಗೆ ಅನಾರೋಗ್ಯ

ಬೆಂಗಳೂರು: ಕನ್ನಡದ ಹಿರಿಯ ನಟಿ ಲೀಲಾವತಿ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದಾರೆ.
ಅವರ ನಿವಾಸಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರು ಭೇಟಿ ಮಾಡಿ ನೀಡಿ, ಆರೋಗ್ಯ ವಿಚಾರಿಸಿದರು.
ಲೀಲಾವತಿ ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ನೆಲಮಂಗಲದ ಬಳಿಯ ಅವರ ತೋಟದ ಮನೆ ಯಲ್ಲಿಯೇ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆಯನ್ನು ನಟಿ ಲೀಲಾವತಿಗೆ ನೀಡಲಾಗುತ್ತಿದೆ.

ವಿಷಯ ತಿಳಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾಮ ಹರೀಶ್ ಅವರು, ನಟಿ ಲೀಲಾವತಿ ನಿವಾಸಕ್ಕೆ ಭೇಟಿ ನೀಡಿ, ಅವರ ಆರೋಗ್ಯವನ್ನು ವಿಚಾರಿಸಿದರು. ತಾಯಿಯ ಆರೋಗ್ಯದ ಬಗ್ಗೆ ನಟ ವಿನೋದ್ ರಾಜ್ ಕುಮಾರ್ ಮಾಹಿತಿ ನೀಡಿದರು.

ಲೀಲಾವತಿ ದಕ್ಷಿಣ ಭಾರತದ ಜನಪ್ರಿಯ ನಟಿ. ಕನ್ನಡದಲ್ಲಿ ಅಷ್ಟೇ ಅಲ್ಲ ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆ ಸೇರಿದಂತೆ ಒಟ್ಟು 600 ಚಿತ್ರ ಗಳಲ್ಲಿ ನಟಿಸಿದ್ದಾರೆ. ಕರ್ನಾಟಕ ಸರ್ಕಾರ ಚಲನಚಿತ್ರರಂಗದ ಜೀವಮಾನ ಸಾಧನೆಗೆ ನೀಡುವ ಅತ್ತ್ಯುನ್ನತ ಪ್ರಶಸ್ತಿ ಡಾ. ರಾಜಕುಮಾರ್ ಪ್ರಶಸ್ತಿಯನ್ನು 1999-2000ದ ಸಾಲಿನಲ್ಲಿ ಲೀಲಾವತಿಗೆ ನೀಡಲಾಗಿದೆ. 2008ರಲ್ಲಿ ತುಮಕೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪದವಿ ನೀಡಲಾಯ್ತು.

ಲೀಲಾವತಿ ಹುಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ. ನಾಟಕ, ರಂಗಭೂಮಿ ಬಗ್ಗೆ ಚಿಕ್ಕವಯಸ್ಸಿನಲ್ಲೇ ಆಸಕ್ತಿ ಹೊಂದಿದ್ದರು. ಲೀಲಾ ಅವರು ವೃತ್ತಿಜೀವನ ಆರಂಭಿಸಿದ್ದು ಮೈಸೂರಿನಲ್ಲಿ. ವೃತ್ತಿರಂಗಭೂಮಿಯಲ್ಲಿ ಸಂಪೂರ್ಣ ತೊಡಗಿಸಿಕೊಳ್ಳುವ ಮುನ್ನ ಕೆಲವೆಡೆ ಮನೆ ಕೆಲಸ ಮಾಡಿಕೊಂಡು ಜೀವನ ಸಾಗಿಸಿದ್ದಾರೆ.