ಚಿಕ್ಕನಾಯಕನಹಳ್ಳಿ ; ಪಟ್ಟಣದ ವಿನಾಯಕ ನಗರದಲ್ಲಿ ಗೌರಿ ಗಣೇಶ ಮೂರ್ತಿಯ ವಿಸರ್ಜನಾ ಮಹೋತ್ಸವ ಗುರುವಾರ ವಿಜೃಂಭಣೆಯಿ0ದ ನಡೆಯಿತು.
ವಾಹನದ ಮೇಲೆ ವಿವಿದ ಬಗೆಯ ಪುಷ್ಪಗಳಿಂದ ಸಿಂಗರಿಸಿದ್ದ ಮಂಟಪದಲ್ಲಿ ಗಣೇಶ ಮೂರ್ತಿಯನ್ನು ಇರಿಸಿ ಮೆರವಣಿಗೆ ಮೂಲಕ ಪ್ರಮುಖ ರಸ್ತೆಯಲ್ಲಿ ಒಯ್ಯಲಾಯಿತು. ವಿಸರ್ಜನಾ ಮಹೋತ್ಸವಕ್ಕೆ ಚಾಲನೆ ನೀಡಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗು ನೀರಾವರಿ ಹೋರಾಟಗಾರ ಡಾ.ಪರಮೇಶ್ವರಪ್ಪ ಮಾತನಾಡಿ ಗಣೇಶ ಇಡುವ ಸಂಪ್ರದಾಯವು ಸ್ವಾತಂತ್ರö್ಯ ಪೂರ್ವದಲ್ಲಿ ತಿಲಕರು ಆರಂಭಿಸಿದರು.
ಇಂದು ಪ್ರತಿ ಗಲ್ಲಿಗಳಲ್ಲೂ ಗಣೇಶನನ್ನು ಪ್ರತಿಷ್ಠಾಪಿಸಿ ಪೂಜಿಸುತ್ತಿದ್ದಾರೆ. ರಾಜ್ಯಾದ್ಯಂತ ಉತ್ತಮ ಮಳೆಯಾಗಿದ್ದು ಕೆರೆ ಕಟ್ಟೆಗಳು ತುಂಬಿ ತುಳುಕುತ್ತಿವೆ. ಪ್ರತಿ ವರ್ಷವೂ ಉತ್ತಮ ಮಳೆಯಾಗಿ ರೈತನ ಬದುಕು ಹಸನಾಗಲಿ ಎಂದು ಪ್ರಾರ್ಥಿಸಿದರು.
ಕೆಪಿಸಿಸಿ ಸೇವಾದಳದ ರಾಜ್ಯ ಸಂಘಟನಾ ಕಾರ್ಯದರ್ಶಿ ಕೃಷ್ಣೇಗೌಡ, ಮುಖಂಡರಾದ ಇಟ್ಟಿಗೆ ಗಿರೀಶ್ ಹಾಗು ಇತರರು ಸಾಥ್ ನೀಡಿದರು.