Friday, 22nd November 2024

ಆಮ್ ಆದ್ಮಿ ಪಕ್ಷದ ಮಾನ್ಯತೆ ರದ್ದುಪಡಿಸಲು ಚುನಾವಣಾ ಆಯೋಗಕ್ಕೆ ಪತ್ರ

ವದೆಹಲಿ: ತಮ್ಮ ಪಕ್ಷದ ಪರವಾಗಿ ಸರ್ಕಾರಿ ಅಧಿಕಾರಿಗಳು ಕೆಲಸ ನಿರ್ವಹಿಸಬೇಕೆಂದು ಪ್ರಚೋದಿಸಿದ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷದ ಮಾನ್ಯತೆ ರದ್ದುಪಡಿಸಬೇಕೆಂದು ಕೋರಿ 56 ನಿವೃತ್ತ ಐಎಎಸ್, ಐಪಿಎಸ್, ಐಆರ್ ಎಸ್ ಅಧಿಕಾರಿಗಳು ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ.

ಸಾರ್ವಜನಿಕ ಸೇವಾ ಅಧಿಕಾರಿಗಳನ್ನು ಗುಜರಾತ್ ಚುನಾವಣೆಯಲ್ಲಿ ತೊಡಗಿಸಿಕೊಳ್ಳು ವಂತೆ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಬಹಿರಂಗವಾಗಿ ಕರೆ ಕೊಟ್ಟಿರುವುದು ನೀತಿ ಸಂಹಿತೆ ಉಲ್ಲಂಘನೆಯಾಗಿದೆ.

ಆಯೋಗಕ್ಕೆ ಬರೆದ ಪತ್ರಕ್ಕೆ ಕರ್ನಾಟಕದ ಮಾಜಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಂ.ಮದನ್ ಗೋಪಾಲ್, ಕೇರಳದ ನಿವೃತ್ತ ಮುಖ್ಯ ಕಾರ್ಯದರ್ಶಿ ಆನಂದ್ ಬೋಸ್, ನಿವೃತ್ತ ರಾಯಭಾರಿ ನಿರಂಜನ್ ದೇಸಾಯಿ, ಆಂಧ್ರಪ್ರದೇಶದ ನಿವೃತ್ತ ಡಿಜಿಪಿ ಉಮೇಶ್ ಕುಮಾರ್ ಸೇರಿದಂತೆ 56 ಮಂದಿ ನಿವೃತ್ತ ಅಧಿಕಾರಿಗಳು ಸಹಿ ಹಾಕಿರುವುದಾಗಿ ವರದಿ ತಿಳಿಸಿದೆ.

ಒಬ್ಬ ರಾಜ್ಯದ ಮುಖ್ಯಮಂತ್ರಿಯಾಗಿ ಇಂತಹ ವಿವಾದಿತ ಹೇಳಿಕೆ ನೀಡುವುದನ್ನು ನಾವು ನಿರೀಕ್ಷಿಸಿರಲಿಲ್ಲ ಎಂದು ಮದನ್ ಗೋಪಾಲ್ ತಿಳಿಸಿದ್ದಾರೆ.