ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು ೨೦೨೨-೨೩ರ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮ ಪ್ರವೇಶಾತಿ ಪ್ರಾರಂಭವಾಗಿದೆ ಎಂದು ಕೆಎಸ್ಒಯು ಪ್ರಾದೇಶಿಕ ನಿರ್ದೇಶಕ ಡಾ. ಲೋಕೇಶ.ಆರ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸ್ನಾತಕ,ಸ್ನಾತಕೋತ್ತರ ಕೋರ್ಸು ಗಳಾದ ಬಿ.ಎ., ಬಿ.ಕಾಂ., ಬಿ.ಬಿ.ಎ., ಬಿ.ಸಿ.ಎ., ಬಿ.ಎಲ್.ಐ.ಎಸ್ಸಿ., ಬಿ.ಎಸ್ಸಿ., ಎಂ.ಎ., ಎಂ.ಸಿ.ಜೆ., ಎಂ.ಕಾಂ., ಎಂ.ಎಲ್.ಐ.ಎಸ್ಸಿ., ಎಂ.ಎಸ್ಸಿ. ಎಂ.ಬಿ.ಎ., ಪಿ.ಜಿ. ಡಿಪ್ಲೋಮಾ ಪ್ರೋಗ್ರಾಮ್ಸ್., ಡಿಪ್ಲೋಮಾ ಪ್ರೋಗ್ರಾಮ್ಸ್., ರ್ಟಿಫಿಕೇಟ್ ಪ್ರೋಗ್ರಾಮ್ಸ್ಗಳಿಗೆ ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರ ದಲ್ಲಿ ಪ್ರವೇಶಾತಿ ಮಾಡಿಕೊಳ್ಳಲಾಗುತ್ತಿದೆ. ಪ್ರಥಮ ವರ್ಷದ ಪ್ರವೇಶಾತಿಗೆ ಅ.೩೧ ಕಡೆಯ ದಿನವಾಗಿದೆ ಎಂದರು.
ಕರಾಮುವಿಯ ಅಧಿಕೃತ ವೆಬ್ಸೈಟ್ www.ksoumysuru.ac.in ಮೂಲಕ ಪದವಿ ಗಳಿಗೆ ಅನ್ಲೈನ್ನಲ್ಲಿ ಅರ್ಜಿ ಭರ್ತಿ ಮಾಡಿ ನಂತರ ಪ್ರಾದೇಶಿಕ ಕೇಂದ್ರಕ್ಕೆ ಖುದ್ದಾಗಿ ಭೇಟಿ ನೀಡಿ ದಾಖಲಾತಿಗಳ ಪರಿಶೀಲನೆ ನಂತರ ಅನ್ಲೈನ್ ಮುಖಾಂತರ ಪ್ರವೇಶಾತಿ ಶುಲ್ಕ ಪಾವತಿಸಿ ಸಿದ್ದಪಾಠಗಳನ್ನು ಪಡೆಯಬಹುದು ಎಂದು ತಿಳಿಸಿದರು.
ಹೆಚ್ಚಿನ ವಿವರಗಳಿಗೆ ಡಾ. ಲೋಕೇಶ. ಆರ್, ಪ್ರಾದೇಶಿಕ ನರ್ದೇಶಕರು, ದೂರವಾಣಿ ಸಂಖ್ಯೆ- ೦೮೧೬-೨೯೫೫೫೮೦, ೯೮೪೪೫೦೬೬೨೯, ೯೮೮೬೧೧೨೪೩೪, ೭೩೪೯೪೭೪೩೩೯ ಅನ್ನು ಸಂರ್ಕಿಸಬಹುದಾಗಿದೆ.