Sunday, 24th November 2024

4,858 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ

covid
ವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಕುಸಿತ ಕಂಡಿದೆ. ಕಳೆದ 24 ಗಂಟೆಯಲ್ಲಿ 4,858 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,28,355 ಜನರು ಕೋವಿಡ್ ನಿಂದ ಮೃತಪಟ್ಟಿದ್ದಾರೆ. 24 ಗಂಟೆಯಲ್ಲಿ 6,322 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ 48,027 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.71ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,39,62,664 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ದೇಶದಲ್ಲಿ ಈವರೆಗೆ 2,16,70,14,127 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,75,935 ಜನರಿಗೆ ಕೋವಿಡ್ ಟೆಸ್ಟ್ ಮಾಡ ಲಾಗಿದೆ.