Sunday, 24th November 2024

4,510 ಕೋವಿಡ್ ಪ್ರಕರಣ ದೃಢ

#corona

ವದೆಹಲಿ: ದೇಶದಲ್ಲಿ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 4,510 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 46,216ಕ್ಕೆ ಇಳಿದಿದೆ.

ಇದೇ ಅವಧಿಯಲ್ಲಿ 33 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದು, ಕೋವಿಡ್‌ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,28,403 ಏರಿದೆ. ಕೇರಳ ಒಂದರಲ್ಲೇ 19 ಮಂದಿ ಮೃತಪಟ್ಟಿದ್ದಾರೆ. ದೇಶದಲ್ಲಿ ಈವರೆಗೆ 4,45,47,599 ಮಂದಿಗೆ ಕೋವಿಡ್ ದೃಢಪಟ್ಟಿದೆ.

ಒಟ್ಟು ಸೋಂಕಿತ ಪ್ರಕರಣಗಳ ಪೈಕಿ ಶೇಕಡ 0.10 ರಷ್ಟು ಸಕ್ರಿಯ ಪ್ರಕರಣ ಗಳಿವೆ. ದೈನಂದಿನ ಪಾಸಿಟಿವಿಟಿ ದರ ಶೇಕಡ 1.33 ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇಕಡ 1.80ರಷ್ಟಿದೆ.

ದೇಶದಲ್ಲಿ ಈವರೆಗೆ 216.95 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಣೆ ಮಾಡಲಾಗಿದೆ.