ದೇಶದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸುತ್ತಿದ್ದಾರೆ ಎಂದು ಆರೋಪಿಸಿ, ಎನ್‌ಐಎ ಮತ್ತು ಇತರ ಏಜೆನ್ಸಿಗಳು ಗುರುವಾರ ಪಿಎಫ್‌ಐ ಕಚೇರಿ ಗಳು ಮತ್ತು ಸಂಬಂಧಿತ ವ್ಯಕ್ತಿಗಳ ನಿವಾಸಗಳ ಮೇಲೆ ದಾಳಿ ನಡೆಸಿ ಅವರನ್ನು ಬಂಧಿಸಿರುವುದನ್ನು ವಿರೋಧಿಸಿ ಪಿಎಫ್‌ಐ ಈ ಬಂದ್‌ಗೆ ಕರೆ ನೀಡಿದೆ.
ತಿರುವನಂತಪುರಂ ಮತ್ತು ಕಣ್ಣೂರಿನಲ್ಲಿ ವಿಮಾನ ನಿಲ್ದಾಣಗಳಿಗೆ ತೆರಳುತ್ತಿದ್ದ ವಾಹನಗಳ ಮೇಲೂ ಕಲ್ಲು ತೂರಾಟ ನಡೆದಿದೆ. ಕೊಲ್ಲಂ ಜಿಲ್ಲೆಯಲ್ಲಿ, ದ್ವಿಚಕ್ರ ವಾಹನದಲ್ಲಿ ಬಂದ ಪಿಎಫ್‌ಐ ಕಾರ್ಯಕರ್ತರು ಜನರನ್ನು ತಡೆಯಲು ಯತ್ನಿಸಿದ್ದಾರೆ. ಈ ಸಂದರ್ಭ ಮಧ್ಯಪ್ರವೇಶಿಸಿದ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಕೆಡವಿದ್ದಾರೆ.
ಪಿಎಫ್‌ಐ ಕಾರ್ಯಕರ್ತರು ನಡೆಸಿದ ಕಲ್ಲು ತೂರಾಟದಲ್ಲಿ ಕೋಯಿಕ್ಕೋಡ್ ಮತ್ತು ಕಣ್ಣೂರಿನಲ್ಲಿ ಕ್ರಮವಾಗಿ 15 ವರ್ಷದ ಯುವತಿ ಮತ್ತು ಆಟೋ ಚಾಲಕ ಗಾಯ ಗೊಂಡಿದ್ದಾರೆ.
ಕಲ್ಲು ತೂರಾಟದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸಾರಿಗೆ ಬಸ್‌ಗಳನ್ನು ಕೆಲ ಕಾಲ ಸ್ಥಗಿತಗೊಳಿಸಲಾಗಿತ್ತು. ಹಲವೆಡೆ ಅಂಗಡಿ, ಮುಂಗಟ್ಟುಗಳನ್ನು ಮುಚ್ಚಲಾಗಿದೆ.