ತಿಪಟೂರು : ಸಹಕಾರ ಸಂಘಗಳು ಜಾತಿ ಹಾಗೂ ಪಕ್ಷ ರಹಿತವಾಗಿ ಕರ್ಯ ನರ್ವಹಿಸಬೇಕು ಆಗ ಮಾತ್ರ ತನ್ನ ಸದಸ್ಯರಿಗೆ ಸೇವೆ ಸಲ್ಲಿಸಲು ಸಾಧ್ಯ ಹಾಗೂ ಸಂಘಗಳ ಅಭಿವೃದ್ಧಿ ಸಾಧ್ಯ ಎಂದು ತಮ್ಮಡಿಹಳ್ಳಿ ಮಠದ ಡಾ. ಅಭಿನವ ಮಲ್ಲಿಕರ್ಜುನ ದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು.
ತಾಲ್ಲೂಕಿನ ಕರಡಿ ಗ್ರಾಮದಲ್ಲಿ ಶನಿವಾರ ಕರಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ೨೦೨೧- ೨೨ನೇ ಸಾಲಿನ ರ್ವ ಸದಸ್ಯರ ಮಹಾಸಭೆಯಲ್ಲಿ ಮಾತನಾಡಿದ ಅವರು ಕರಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಅಭಿವೃದ್ಧಿ ಪಥದಲ್ಲಿದೆ. ಸ್ಥಳೀಯ ಜನರಿಗೆ ರ್ಥಿಕವಾಗಿ ಸದೃಢತೆಯನ್ನು ಒದಗಿಸಿಕೊಡುತ್ತಿದ್ದು ಯಾವುದೇ ತಾರತಮ್ಯ ಮಾಡುತ್ತಿಲ್ಲ. ಇದರ ಸೇವೆ ಹೀಗೆ ಮುಂದು ವರೆಯಲಿ ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ತ್ರಿಯಂಬಕ ಮಾತನಾಡಿ ಕರಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಪಡಿತರ ಹಾಗೂ ಸಾಲ ಸೌಲಭ್ಯದ ಜೊತೆ ಪಶು ಆಹಾರ ಸೇರಿದಂತೆ ಸದಸ್ಯರ ಇತರೆ ಅವಶ್ಯಕತೆಗಳನ್ನು ಪೂರೈಸುತ್ತಿರುವುದು ಸಂತಸ ತಂದಿದೆ ಎಂದರು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಕೆ.ಆರ್. ದೇವರಾಜು, ಸಂಘವು ಉತ್ತಮವಾಗಿ ಕರ್ಯನರ್ವಹಿಸುತ್ತಿದ್ದು ಪ್ರಸ್ತುತ ಕೆಸಿಸಿ ಸಾಲವನ್ನು ಜಿಲ್ಲಾ ಬ್ಯಾಂಕಿನವರು ೫೦,೦೦೦ ಕ್ಕೆ ಮಿತಿಗೊಳಿಸಿದ್ದು ಹೆಚ್ಚಿನ ಸಾಲ ಸೌಲಭ್ಯ ನೀಡಲು ತುಮಕೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷ ಕೆ ಎನ್ ರಾಜಣ್ಣನವರನ್ನು ಕೋರಿದರು. ಸದಸ್ಯರು ಸಾಲವನ್ನು ಸಕಾಲದಲ್ಲಿ ಮರು ಪಾವತಿಸಿ ಸಂಘದ ಅಭಿವೃದ್ಧಿಗೆ ಸಹಕರಿಸಬೇಕೆಂದು ಕೋರಿದರು.
ಈ ಸಂರ್ಭದಲ್ಲಿ ತುಮಕೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ತಿಪಟೂರು ಶಾಖೆಯ ಮೇಲ್ವಿಚಾರಕ ಟಿ ಪಿ ಉಮಾಶಂಕರ್, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ನಿವೃತ್ತ ವ್ಯವಸ್ಥಾಪಕ ಮುದ್ದಪ್ಪ , ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕಿ ಲಲಿತರನ್ನು ಸನ್ಮಾನಿಸಲಾಯಿತು.
ಸಂಘದ ಸದಸ್ಯರ ಮಕ್ಕಳು ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿತ್ತು.