Friday, 18th October 2024

ಲಖಿಂಪುರ ಖೇರಿ: ಬಸ್ ಟ್ರಕ್‌ಗೆ ಡಿಕ್ಕಿ, ಎಂಟು ಮಂದಿ ಸಾವು

ಕ್ನೊ: ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಬುಧವಾರ ಬಸ್ಸೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಮೃತಪಟ್ಟು, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಇಸಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಸ್ ದೌರೆಹ್ರಾದಿಂದ ಲಕ್ನೊಕ್ಕೆ ತೆರಳುತ್ತಿತ್ತು.

ಕೆಲವು ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಕೆಲವರನ್ನು ಲಕ್ನೋಗೆ ಕಳುಹಿಸಲಾಗಿದೆ ಎಂದು ಲಖಿಂಪುರ ಖೇರಿ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಸಂಜಯ್ ಕುಮಾರ್ ತಿಳಿಸಿದ್ದಾರೆ.