Friday, 22nd November 2024

ದೇಶಾದ್ಯಂತ ಪಾಪ್ಯುಲರ್ ಫ್ರಂಟ್‌ ಆಫ್‌ ಇಂಡಿಯಾ ಸಂಘಟನೆಗೆ ನಿಷೇಧ

ನವದೆಹಲಿ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಅದರ 8 ಸಹವರ್ತಿಗಳು ಅಥವಾ ಅಂಗಸಂಸ್ಥೆಗಳನ್ನು ಐದು ವರ್ಷಗಳವರೆಗೆ ನಿಷೇಧಿಸಿ ಕೇಂದ್ರ ಸರಕಾರ ಅಧಿ ಸೂಚನೆ‌ ಹೊರಡಿಸಿದೆ.

ಯುಎಪಿಎ ಕಾಯ್ದೆಯಡಿ 5 ವರ್ಷಗಳ ಕಾಲ ಪಾಪ್ಯುಲರ್ ಫ್ರಂಟ್‌ ಆಫ್‌ ಇಂಡಿಯಾ ಸಂಘಟನೆಯನ್ನು ದೇಶಾದ್ಯಂತ ಬ್ಯಾನ್ ಮಾಡಿದೆ.

ಇವುಗಳು ದೇಶದ ಸಮಗ್ರತೆ, ಸಾರ್ವಭೌಮತೆ ಮತ್ತು ಭದ್ರತೆಗೆ ಹಾನಿಕರವಾಗಿದೆ. ಮತ್ತು ಸಾರ್ವಜನಿಕ ಶಾಂತಿ ಮತ್ತು ದೇಶದ ಕೋಮು ಸೌಹಾರ್ದತೆಗೆ ಭಂಗ ತರುವ ಚಟುವಟಿಕೆ ಯಲ್ಲಿ ತೊಡಗಿವೆ ಎಂಬ ಆರೋಪವಿದ್ದು. ಇದೀಗ ಕೇಂದ್ರ‌ ಸರಕಾರ ನಿಷೇಧ ಹೇರಿದೆ.

ಹಲವು ದಿನಗಳಿಂದ ಸಂಘಟನೆಯ ವಿರುದ್ಧ ರಾಜ್ಯಗಳಲ್ಲಿ ಎನ್‌ಐಎ ದಾಳಿ ನಡೆಸಿದ್ದು, ಪಿಎಫ್‌ಐ ಜತೆ ಸಂಬಂಧ ಹೊಂದಿದ 200ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ.