ವಿಶ್ವವಾಣಿ ಸುದ್ದಿಮನೆ
ಬೆಂಗಳೂರು:
ರಾಜ್ಯದ ಹಲವು ಜಿಲ್ಲೆಗಳಲ್ಲಿನ ಮಾಂಸಹಾರಿ ಹೋಟೆಲ್ ಮತ್ತು ಢಾಬಾಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಂಡು ಸೂಕ್ತ ವರದಿ ನೀಡುವಂತೆ ಬೆಳಗಾವಿಯ ಅಬಕಾರಿ ಜಂಟಿ ಆಯುಕ್ತರು ಸೂಚಿಸಿದ್ದಾರೆ.
‘ಢಾಬಾ ಮತ್ತು ಮಾಂಸಹಾರಿ ಹೋಟೆಲ್ ನಲ್ಲಿ ಅಕ್ರಮ’ ಎಂಬ ಶೀರ್ಷಿಕೆಯಡಿ ‘ವಿಶ್ವವಾಣಿ ‘ ದಿನಪತ್ರಿಕೆಯಲ್ಲಿ ಸುದ್ದಿ ಪ್ರಕಟವಾಗಿತ್ತು. ಎಚ್ಚೆದ್ದ ಅಧಿಕಾರಿಗಳು ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ ಮಾಲೀಕರ ವಿರುದ್ಧ ಕೂಡಲೇ ಕ್ರಮ ಜರುಗಿಸಲಾಗಿಸುವುದು ಎಂದು ಆದೇಶಿಸಿದ್ದಾರೆ.
ಬಾಗಲಕೋಟೆ, ಹಾವೇರಿ, ವಿಜಯಪುರ, ಧಾರವಾಡ ಈ ಪ್ರದೇಶಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಕುರಿತು ದೂರುಗಳು ಕೇಳಿ ಬಂದಿದ್ದು, ಅಂಕಿ ಅಂಶಗಳ ಸಹಿತ ವರದಿ ಬಿತ್ತರಿಸಲಾಗಿತ್ತು. ಕಳೆದ ಆರು ವರ್ಷಗಳಲ್ಲಿ ಹದಿನಾರು ಸಾವಿರಕ್ಕೂ ಹೆಚ್ಚು ಪ್ರಕರಣಗಳು ನನೆಗುದಿಗೆ ಬಿದ್ದಿತ್ತು.
ಈ ಜಿಲ್ಲೆಗಳಲ್ಲದೆ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳ ಸಂಪರ್ಕಿತ ಜಿಲ್ಲೆಗಳಲ್ಲೂ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ ಕುರಿತು ವರದಿಯಲ್ಲಿ ಸಂಕ್ಷಿಪ್ತವಾಗಿ ಉಲ್ಲೇಖಿಸಲಾಗಿತ್ತು.
ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಹೋಟೆಲ್ ಗಳ ವಿರುದ್ಧ ಕ್ರಮ ಕೈಗೊಳ್ಳಲು ಸ್ಥಳೀಯ ಅಬಕಾರಿ ಅಧಿಕಾರಿಗಳು ಆಯುಕ್ತರು ಸೂಚಿಸಿದ್ದಾರೆ. ಅಲ್ಲದೆ, ಕೈಗೊಳ್ಳಲಾದ ಕ್ರಮಗಳ ಬಗ್ಗೆ ವರದಿ ನೀಡಲು ತಿಳಿಸಿದ್ದಾರ