Friday, 22nd November 2024

ರಾಜ್ಯಸಭಾ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ರಾಜೀನಾಮೆ

ನವದೆಹಲಿ: ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ತಮ್ಮ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಶುಕ್ರವಾರ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ಖರ್ಗೆ ತಮ್ಮ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭೆಯಲ್ಲಿ ವಿಪಕ್ಷ ನಾಯಕ ಸ್ಥಾನದ ಜವಾಬ್ದಾರಿ ಹೊತ್ತಿದ್ದರು.

ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಮಾತನಾಡಿ, ಕಾಂಗ್ರೆಸ್‌ ಪಕ್ಷದ ನಿಯಮ ಒಬ್ಬರಿಗೆ ಒಂದೇ ಹುದ್ದೆ ಅನ್ವಯ ತಮ್ಮ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದರು.

ರಾಜಸ್ಥಾನದ ಉದಯ್‌ ಪುರದಲ್ಲಿ ನಡೆದ ಚಿಂತನ್‌ ಸಭೆಯಲ್ಲಿ ಕಾಂಗ್ರೆಸ್‌ ಪಕ್ಷದ ಪುನಶ್ಚೇತನಕ್ಕಾಗಿ ಹಲವಾರು ಹೊಸ ನಿಯಮ ಗಳನ್ನು ಅಳವಡಿಸಿಕೊಳ್ಳಲಾಯಿತು.

ಗಾಂಧಿ ಕುಟುಂಬದ ಬೆಂಬಲ ಪಡೆದಿರುವ ೮೦ ವರ್ಷದ ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರ್‌ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದು, 25 ವರ್ಷಗಳ ನಂತರ ಗಾಂಧೀಯೇತರ ಕುಟುಂಬದ ಸದಸ್ಯರೊಬ್ಬರು ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಸ್ಥಾನ ಅಲಂಕರಿಸಲಿದ್ದಾರೆ.