ನಾಪತ್ತೆಯಾಗಿದ್ದ ಪರ್ವತಾರೋಹಣ ತಂಡದ 15 ಮಂದಿಯನ್ನು ರಕ್ಷಿಸ ಲಾಗಿದೆ. ರಕ್ಷಣಾ ಕಾರ್ಯಾಚರಣೆಯನ್ನು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್), ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ ಎಫ್), ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಮತ್ತು ನೆಹರು ಇನ್ಸ್ಟಿಟ್ಯೂಟ್ ಆಫ್ ಮೌಂಟೇನಿಯರಿಂಗ್ (ಎನ್ಐಎಂ) ಪರ್ವತಾರೋಹಿಗಳು ನಡೆಸುತ್ತಿವೆ.
ಹವಾಮಾನ ಪರಿಸ್ಥಿತಿ ಸುಧಾರಿಸಿರುವುದರಿಂದ ಹೆಲಿಪ್ಯಾಡ್ನಲ್ಲಿ ರಕ್ಷಣಾ ಕಾರ್ಯಾಚರಣೆ ಪುನರಾರಂಭಗೊಂಡಿದೆ. ಐವರನ್ನು ಉತ್ತರಕಾಶಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನೂ 27 ಮಂದಿ ಪರ್ವತಾರೋಹಿಗಳು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಇಬ್ಬರು ಬೋಧಕರು ಮತ್ತು ಪ್ರಶಿಕ್ಷಣಾರ್ಥಿಗಳು ಸೇರಿದಂತೆ ನಾಲ್ವರ ಮೃತದೇಹಗಳು ಪತ್ತೆಯಾಗಿವೆ.