Saturday, 23rd November 2024

ಜಾರಿ ನಿರ್ದೇಶನಾಲಯದ ವಿಚಾರಣೆಗೆ ಹಾಜರಾದ ಡಿ.ಕೆ.ಶಿ

ವದೆಹಲಿ: ನ್ಯಾಷನಲ್ ಹೆರಾಲ್ಡ್ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ಕಾಂಗ್ರೆಸ್ ಘಟಕದ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜಾರಿ ನಿರ್ದೇಶನಾಲಯದ ವಿಚಾರಣೆಗೆ ಹಾಜರಾಗಿದ್ದಾರೆ.

ಇ.ಡಿ ಕಚೇರಿಗೆ ತೆರಳುವ ಮುನ್ನ, ಮಾಧ್ಯಮದವರ ಜೊತೆ ಮಾತನಾಡಿದ ಅವರು, ನಾನು ಕಾನೂನನ್ನು ಗೌರವಿಸುವ ನಾಗರಿಕ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ನಡೆಯುತ್ತಿರುವ ಭಾರತ್ ಜೋಡೊ ಯಾತ್ರೆಯ ಹೊಣೆ ಹೊತ್ತಿರುವ ಶಿವ ಕುಮಾರ್, ಗುರುವಾರ ಪಕ್ಷದ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕಿದ್ದರು. ಕಳೆದ ಸೆಪ್ಟೆಂಬರ್ 19ರಂದು ಇ.ಡಿ ಮುಂದೆ ಡಿಕೆಶಿ ವಿಚಾರಣೆಗೆ ಹಾಜರಾಗಿದ್ದರು.

ನ್ಯಾಷನಲ್ ಹೆರಾಲ್ಡ್ ಮಾಲೀಕತ್ವದ ಯಂಗ್ ಇಂಡಿಯನ್ ಸಂಸ್ಥೆಗೆ ಹಣ ದೇಣಿಗೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ. ಶಿವಕುಮಾರ್ ಮತ್ತು ಅವರ ಸಹೋದರ, ಸಂಸದ ಡಿ.ಕೆ. ಸುರೇಶ್ ವಿಚಾರಣೆ ನಡೆಸಲಾಗುತ್ತಿದೆ.