Friday, 22nd November 2024

ಉತ್ತರ ಭಾರತದಲ್ಲಿ ಭಾರೀ ಮಳೆ: ರಸ್ತೆಗಳೆಲ್ಲ ಜಲಾವೃತ, ಜನಜೀವನ ಅಸ್ತವ್ಯಸ್ತ

ವದೆಹಲಿ: ಮಳೆಯಿಂದಾಗಿ ರಸ್ತೆಗಳೆಲ್ಲ ಜಲಾವೃತಗೊಂಡಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಉತ್ತರ ಪ್ರದೇಶ, ಮಹಾರಾಷ್ಟ್ರ, ಉತ್ತರಾಖಂಡ, ಗುಜರಾತ್ ಮತ್ತು ಈಶಾನ್ಯ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂ ಚನೆ ನೀಡಿದೆ.

ಕಳೆದ 40 ಗಂಟೆಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ದೆಹಲಿ-ಎನ್‌ಸಿಆರ್‌ನ ವಿವಿಧ ಭಾಗಗಳು ಮತ್ತು ಇತರ ಅಕ್ಕಪಕ್ಕದ ಪ್ರದೇಶ ಗಳಲ್ಲಿ ಜಲಾವೃತವಾಗಿದೆ.

ಮಹಾರಾಷ್ಟ್ರದಲ್ಲಿ ಹವಾಮಾನ ಇಲಾಖೆ ಎಲ್ಲೋ ಅಲರ್ಟ್ ಘೋಷಿಸಿದೆ. ಜೊತೆಗೆ ಚಂಡಮಾರುತದ ಎಚ್ಚರಿಕೆ ನೀಡಲಾಗಿದೆ. ಮಹಾರಾಷ್ಟ್ರ, ಮರಾಠ ವಾಡ ಮತ್ತು ಕೊಂಕಣದಲ್ಲಿ ಮುಂದಿನ ಮೂರರಿಂದ ನಾಲ್ಕು ದಿನಗಳವರೆಗೆ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಪ್ರದೇಶದಲ್ಲಿ ಶನಿವಾರ ಮಳೆ ಸಂಬಂಧಿತ ಪ್ರತ್ಯೇಕ ಘಟನೆಗಳಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ.

ಅತಿವೃಷ್ಟಿಯಿಂದ ಉಂಟಾದ ಘಟನೆಗಳಲ್ಲಿ ಲಖಿಂಪುರ ಖೇರಿ, ಇಟಾಹ್ ಮತ್ತು ಅಂಬೇಡ್ಕರ್ ನಗರದಲ್ಲಿ ತಲಾ ಒಬ್ಬ ಸಾವು ವರದಿಯಾಗಿದೆ. ಬಂದಾ ಎಂಬಲ್ಲಿ ಸಿಡಿಲು ಬಡಿದು ಮತ್ತೋರ್ವ ವ್ಯಕ್ತಿ ಮೃತಪಟ್ಟಿದ್ದಾರೆ.