Sunday, 24th November 2024

ಮುಲಾಯಂ ಸಿಂಗ್‌ ಯಾದವ್‌ ಇನ್ನಿಲ್ಲ

ಖನೌ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ವರಿಷ್ಠ ಮುಲಾಯಂ ಸಿಂಗ್‌ ಯಾದವ್‌ (82) ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾಗಿದ್ದಾರೆ.

ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಅ.2ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಂದಿನಿಂದಲೂ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

‘ನನ್ನ ಗೌರವಾನ್ವಿತ ತಂದೆಯವರು ಹಾಗೂ ಎಲ್ಲರ ನಾಯಕ ಇನ್ನಿಲ್ಲ’ ಎಂದು ಮಾಜಿ ಮುಖ್ಯಮಂತ್ರಿ ಅಖಿಲೇಶ್‌ ಯಾದವ್ ತಿಳಿಸಿರುವುದಾಗಿ ಸಮಾಜವಾದಿ ಪಕ್ಷದ ಟ್ವಿಟರ್‌ ತಿಳಿಸಿದೆ.