Tuesday, 26th November 2024

ಕೊವಿಡ್-19 : ಗದಗ ಜಿಲ್ಲೆಯಲ್ಲಿ 2 ಸೋಂಕು ದೃಢ

ಗದಗ :

ಗದಗ ಜಿಲ್ಲೆಯಲ್ಲಿ ಬುಧವಾರ ದಿ. 01 ರಂದು 2 ಜನರಲ್ಲಿ ಕೊವಿಡ್-19 ಸೋಂಕು ದೃಢ ಪಟ್ಟಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 178 ಸೋಂಕು ದೃಢಪಟ್ಟಿವೆ. ಅವುಗಳಲ್ಲಿ 3 ವ್ಯಕ್ತಿಗಳು ಮೃತಪಟ್ಟಿದ್ದು, 53 ಜನ ಗುಣಮುಖರಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ 122 ಕೊವಿಡ್-19 ಸೋಂಕಿನ ಸಕ್ರಿಯ ಪ್ರಕರಣಗಳಿವೆ.

ಧಾರವಾಡ ಜಿಲ್ಲೆಯಿಂದ ಜಿಲ್ಲೆಗೆ ಆಗಮಿಸಿದ್ದ ನರಗುಂದ ನಗರದ ಗಡಿ ಓಣಿಯ ನಿವಾಸಿ 39 ವರ್ಷದ ಪುರುಷ (ಪಿ-15320) ಹಾಗೂ ಬೆಂಗಳೂರಿನಿಂದ ಜಿಲ್ಲೆಗೆ ಆಗಮಿಸಿದ್ದ ರೋಣ ನಗರದ ಬಾದಾಮಿ ರಸ್ತೆಯಲ್ಲಿರುವ ಕನ್ನಡ ಶಾಲೆ ಹತ್ತಿರದ ನಿವಾಸಿ 21 ವರ್ಷದ ಪುರುಷ (ಪಿ-15321) ಕೋವಿಡ್-19 ಸೋಂಕು ದೃಢಪಟ್ಟಿದೆ.

ಇವರಿಗೆ ಗದಗ ನಿಗದಿತ ಜಿಮ್ಸ್ಸ್ ಕೊವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಗದಗ ಜಿಲ್ಲಾಧಿಕಾರಿ ಸುಂದರೇಶ್ ಬಾಬು ಎಂ. ತಿಳಿಸಿದ್ದಾರೆ.