ಈ ಮೊದಲು ಮೊಹಮ್ಮದ್ ಶಮಿ, ದೀಪಕ್ ಚಹಾರ್, ಶ್ರೇಯಸ್ ಅಯ್ಯರ್ ಮತ್ತು ರವಿ ಬಿಷ್ಣೋಯ್ ಅವರು ಟಿ20 ವಿಶ್ವಕಪ್ 2022 ರ ಟೀಂ ಇಂಡಿಯಾದ ಮೀಸಲು ಆಟಗಾರರಾಗಿ ಆಯ್ಕೆಯಾಗಿದ್ದರು. ಆದರೆ ಗಾಯದ ಕಾರಣ ಟಿ20 ವಿಶ್ವಕಪ್ನಿಂದ ಹೊರಬಿದ್ದಿರುವ ಜಸ್ಪ್ರೀತ್ ಬುಮ್ರಾ ಅವರ ಸ್ಥಾನಕ್ಕೆ ಮೊಹಮ್ಮದ್ ಶಮಿ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಆಡಿದ ಸಿರಾಜ್ ನಡುವೆ ಫೈಪೋಟಿ ಇದೆ ಎಂದು ಹೇಳಲಾಗುತ್ತಿದೆ.
ಶಮಿ, ಆಫ್ರಿಕಾ ವಿರುದ್ಧ ಭರ್ಜರಿ ಪ್ರದರ್ಶನ ನೀಡಿರುವ ಮೊಹಮ್ಮದ್ ಸಿರಾಜ್ ಮತ್ತು ಶಾರ್ದೂಲ್ ಠಾಕೂರ್ ಆಸ್ಟ್ರೇಲಿಯಾಕ್ಕೆ ಹಾರಲು ಸಿದ್ಧರಾಗಿದ್ದಾರೆ ಎಂದು ವರದಿಯಾಗಿದೆ. ಟೀಮ್ ಇಂಡಿಯಾ ತನ್ನ 15 ಜನರ ತಂಡ ವನ್ನು ಅಂತಿಮಗೊಳಿಸಬೇಕಾಗಿದ್ದು, ಅಕ್ಟೋಬರ್ 15 ರ ಒಳಗೆ ಅಂತಿಮ ತಂಡದ ಪಟ್ಟಿಯನ್ನು ಟೀಂ ಇಂಡಿಯಾ ಐಸಿಸಿಗೆ ಸಲ್ಲಿಸಬೇಕಾಗುತ್ತದೆ.
ಶಮಿ, ಸಿರಾಜ್ ಹಾಗೂ ಶಾರ್ದೂಲ್ ಆಸ್ಟ್ರೇಲಿಯಾಕ್ಕೆ ತಲುಪಿದ ನಂತರ ಬುಮ್ರಾ ಬದಲಿಗೆ ಯಾರನ್ನು ಆಡಿಸಬೇಕು ಎಂದು ನಾಯಕ ರೋಹಿತ್ ಶರ್ಮಾ ಮತ್ತು ಮ್ಯಾನೇಜ್‌ಮೆಂಟ್ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ.
ಅ.23 ರಂದು ಪಾಕಿಸ್ತಾನ ವಿರುದ್ಧದ ಪಂದ್ಯದೊಂದಿಗೆ ಟೀಂ ಇಂಡಿಯಾ ತನ್ನ ವಿಶ್ವಕಪ್ ಅಭಿಯಾನ ಆರಂಭಿಸ ಲಿದೆ. ಬಳಿಕ ಅ.27 ರಂದು ಭಾರತ ಅರ್ಹತಾ ಸುತ್ತಲ್ಲಿ ಎ ಗುಂಪಿನ ರನ್ನರ್ ಅಪ್ ತಂಡವನ್ನು ಎದುರಿಸಲಿದೆ. ಅ. 30 ರಂದು ದಕ್ಷಿಣ ಆಫ್ರಿಕಾ ವಿರುದ್ಧ ಪಂದ್ಯ ನಡೆಯಲಿದೆ. ನವೆಂಬರ್ 2 ರಂದು ಬಾಂಗ್ಲಾದೇಶವನ್ನು ಎದುರಿಸ ಲಿದ್ದು, ನವೆಂಬರ್ 6 ರಂದು ಬಿ ಗುಂಪಿನಿಂದ ಕ್ವಾಲಿಫೈಯರ್ ಪಂದ್ಯದಲ್ಲಿ ಗೆದ್ದ ತಂಡದ ವಿರುದ್ಧ ಪಂದ್ಯವನ್ನಾ ಡಲಿದೆ.