ಶಿಮ್ಲಾ: ಪ್ರಧಾನಿ ನರೇಂದ್ರ ಮೋದಿ ಗುರುವಾರ ಹಿಮಾಚಲ ಪ್ರದೇಶದ ಉನಾ ರೈಲು ನಿಲ್ದಾಣದಿಂದ ದೇಶದ ನಾಲ್ಕನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಧ್ವಜಾರೋಹಣ ನೆರವೇರಿಸಿದರು.
ಈ ರೈಲು ಹಿಮಾಚಲ ಪ್ರದೇಶದ ಅಂಬ್ ಅಂಡೌರಾ ನಡುವೆ ನವದೆಹಲಿಯಿಂದ ಚಲಿಸ ಲಿದೆ. ಹೊಸ ವಂದೇ ಭಾರತ್ ರೈಲು ಹಿಂದಿನ ರೈಲುಗಳಿಗೆ ಹೋಲಿಸಿದರೆ ಸುಧಾರಿತ ಆವೃತ್ತಿಯಾಗಿದ್ದು, ಹೆಚ್ಚು ಹಗುರವಾಗಿದೆ ಮತ್ತು ಕಡಿಮೆ ಅವಧಿಯಲ್ಲಿ ಹೆಚ್ಚಿನ ವೇಗವನ್ನು ತಲುಪುವ ಸಾಮರ್ಥ್ಯವನ್ನು ಹೊಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಂಬಾಲಾ, ಚಂಡೀಗಢ, ಆನಂದಪುರ ಸಾಹಿಬ್ ಮತ್ತು ಉನಾದಲ್ಲಿ ಈ ರೈಲು ಬುಧವಾರ ಹೊರತುಪಡಿಸಿ ವಾರದಲ್ಲಿ ಆರು ದಿನಗಳು ಚಲಿಸುತ್ತದೆ.
ಕೇವಲ 52 ಸೆಕೆಂಡುಗಳಲ್ಲಿ ಗಂಟೆಗೆ 100 ಕಿಮೀ ವೇಗದಲ್ಲಿ ಚಲಿಸುತ್ತದೆ.