ಜಿಲ್ಲಾಧಿಕಾರಿ ಕಚೇರಿಯ ಮುಖ್ಯಮಂತ್ರಿಗಳ ಪರಿಹಾರ ನಿಧಿ ವಿಭಾಗದಲ್ಲಿ ಸಹಾಯಕಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ನೂತನಕುಮಾರಿ ಅವರಿಗೆ ಬೆಂಗಳೂರಿನ ಮುಖ್ಯಮಂತ್ರಿ ಕಚೇರಿಯಲ್ಲಿ ಗ್ರೂಪ್ ‘ಸಿ’ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲಾಗಿತ್ತು. ಆದರೆ, ಅವರು ಮಂಗಳೂರಿನಲ್ಲೇ ಕರ್ತವ್ಯ ನಿರ್ವಹಿಸಲು ಅವಕಾಶ ನೀಡುವಂತೆ ಮುಖ್ಯಮಂತ್ರಿ ಅವರಲ್ಲಿ ವಿನಂತಿಸಿಕೊಂಡ ಕಾರಣ, ಅವರ ಇಚ್ಛೆಯಂತೆ ಮಂಗಳೂರಿನಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅವಕಾಶ ಕಲ್ಪಿಸಿಕೊಡ ಲಾಗಿದೆ.
ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಚಿಕನ್ ಸ್ಟಾಲ್ ಹೊಂದಿದ್ದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ಜುಲೈ 26ರಂದು ದುಷ್ಕರ್ಮಿಗಳು ಹತ್ಯೆ ನಡೆಸಿದ್ದರು. ಇದರಿಂದ ಸಿಟ್ಟಿಗೆದ್ದ ಬಿಜೆಪಿ ಕಾರ್ಯಕರ್ತರು ಆಡಳಿತದ ವಿರುದ್ಧವೇ ಬಹಿರಂಗ ವಾಗಿ ಅಸಮಾಧಾನ ಹೊರಹಾಕಿದ್ದರು.
ಕುಟುಂಬದ ಆಧಾರಸ್ತಂಭವಾಗಿದ್ದ ಪ್ರವೀಣ್ ಮೃತಪಟ್ಟ ಹಿನ್ನೆಲೆಯಲ್ಲಿ ಆತನ ಕುಟುಂಬಕ್ಕೆ ಮಾನವೀಯ ನೆಲೆಯಲ್ಲಿ ಸರ್ಕಾರಿ ಉದ್ಯೋಗ ಕೊಡಿಸುವ ಬಗ್ಗೆ ಸ್ಥಳೀಯ ಬಿಜೆಪಿ ಮುಖಂಡರು ಮುಖ್ಯಮಂತ್ರಿಯನ್ನು ವಿನಂತಿಸಿದ್ದರು. ದೊಡ್ಡಬಳ್ಳಾಪುರದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಪ್ರವೀಣ್ ನೆಟ್ಟಾರು ಪತ್ನಿಗೆ ಸಿಎಂ ಸಚಿವಾಲಯದಲ್ಲಿ ಕೆಲಸ ಕೊಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದರು.