ಕೊರಟಗೆರೆ: ಪರೀಕ್ಷೆಯಲ್ಲಿ ಅಂಕ ಕಡಿಮೆ ಬಂದಿದೆ ಎಂದು ಪಿಯು ಕಾಲೇಜಿನ ಪ್ರಥಮ ವರ್ಷ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ತಾಲೂಕಿನ ಹೊಳವನಹಳ್ಳಿ ಹೋಬಳಿ ವ್ಯಾಪ್ತಿಯ ಮಧ್ಯವೆಂಕಟಪುರ ಗ್ರಾಮದ ಸಿದ್ದ ಲಿಂಗೇಶ್ವರ ಮಗಳಾದ ಗುಣಶ್ರೀ (೧೬) ವರ್ಷದ ವಿದ್ಯಾರ್ಥಿಯೇ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಪಟ್ಟಣದ ಪ್ರಿಯದರ್ಶಿನಿ ಪಿಯು ಕಾಲೇಜಿನಲ್ಲಿ ಪ್ರಥಮ ಪಿಯುಸಿಯ ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಬಂದಿಲ್ಲ ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಮುಂದೆ ಇರುವ ಜಮೀ ನೊಂದರ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.
ಪರೀಕ್ಷೆಯಲ್ಲಿ ಅಂಕ ಕಡಿಮೆ ಬಂದಿದ್ದು, ಪೋಷಕರಿಗೆ ತಿಳಿಸಿ ಸಹಿ ಹಾಕಿಸಿಕೊಂಡು ಬರಲು ಕಾಲೇಜು ಆಡಳಿತ ಮಂಡಳಿ ತಿಳಿಸಿದ್ದಾರೆ. ಪೋಷಕರಿಗೆ ಪರೀಕ್ಷೆಯ ಅಂಕ ಪಟ್ಟಿ ತೋರಿಸಿದರೆ ಬೈಯುತ್ತಾರೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪಕ್ಕ ದಲ್ಲಿನ ಜಮೀನಿನ ಬಾವಿಯೊಂದರಕ್ಕೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಈ ಸಂಬ0ಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಥಳಕ್ಕೆ ಸಿಪಿಐ ಸುರೇಶ್, ಪಿಎಸ್ಐ ಚೇತನ್ ಕುಮಾರ್, ಎಎಸ್ಐ ಯೋಗಿಶ್, ಸ್ಥಳಕ್ಕೆ ಬೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.