ರಾಜ್ಯದಲ್ಲಿ ಮುಂದಿನ 5 ದಿನ ಭಾರಿ ಮಳೆ
-8 ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್
ಬೆಂಗಳೂರು : ಬಂಗಾಳ ಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಮಳೆಯಾಗುತ್ತಿದ್ದು, ಮುಂದಿನ 5 ದಿನ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಕೊಡಗು ಹಾಗೂ ಚಿಕ್ಕಮಗಳೂರಿನಲ್ಲಿ ಜು.9ರಿಂದ. 3 ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು, ಬೆಂ.ಗ್ರಾ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ ಮತ್ತು ತುಮಕೂರಿನಲ್ಲಿ ಮುಂದಿನ 3 ದಿನ ಯೆಲ್ಲೋ ಅಲರ್ಟ್ ಇರಲಿದೆ ಎಂದು ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ತಿಳಿಸಿದ್ದಾರೆ.
ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಏಕಕಾಲದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಪರಿಣಾಮ ರಾಜ್ಯದಲ್ಲಿ ಮುಂಗಾರು ಕ್ರಿಯಾಶೀಲವಾಗಿದೆ . ಹೀಗಾಗಿ, ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಅಗಾಗ್ಗೆ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಬುಧವಾರ ಕರಾವಳಿ ಭಾಗದಲ್ಲಿ ಭರ್ಜರಿ ಮಳೆಯಾಗಿದೆ.