ನವದೆಹಲಿ: ಭಾರತದಲ್ಲಿ ಕರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 1,946 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,46,34,376ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 10 ಸಾವು ಪತ್ತೆಯಾಗುವುದರೊಂದಿಗೆ ಕೋವಿಡ್ ನಿಂದ ಮೃತ ಪಟ್ಟಿರುವವರ ಒಟ್ಟು ಸಂಖ್ಯೆ 5,28,923ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 25,968ಕ್ಕೆ ಇಳಿಕೆಯಾಗಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 2,417 ಮಂದಿ ಗುಣಮುಖರಾಗುವು ದರೊಂದಿಗೆ ಈವರೆಗೂ ಚೇತರಿಸಿ ಕೊಂಡವರ ಸಂಖ್ಯೆ 4,40,79,485ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ಒಂದೇ 2,27,207 ಮಂದಿಯನ್ನು ಕರೋನಾ ಪರೀಕ್ಷೆಗೊಳಪಡಿ ಸಲಾಗಿದ್ದು, ಈ ವರೆಗೂ 89,89,26,887 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 2,19,41,43,525 ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ.