Friday, 22nd November 2024

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ಫಲಿತಾಂಶ ಇಂದು ಪ್ರಕಟ

ವದೆಹಲಿ: ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶ ಬುಧವಾರ ಪ್ರಕಟವಾಗಲಿದೆ.

24 ವರ್ಷಗಳ ನಂತರ ಕಾಂಗ್ರೆಸ್‌ನ ಮೊದಲ ಗಾಂಧಿಯೇತರ ಮುಖ್ಯಸ್ಥರ ಹೆಸರನ್ನು ಘೋಷಿಸಲಾಗುತ್ತದೆ. ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರ್ ಕಣದಲ್ಲಿದ್ದಾರೆ.

ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಎಣಿಕೆ ಆರಂಭವಾಗಿದ್ದು, ದೇಶಾದ್ಯಂತ ಮತದಾನವಾಗಿ ಸೀಲ್ ಮಾಡಿದ ಮತಪೆಟ್ಟಿಗೆಗಳನ್ನು ತರಲಾಗಿದೆ. ಸೋಮವಾರ ನಡೆದ ಚುನಾವಣೆಯಲ್ಲಿ 9,915 ಅರ್ಹ ನಾಯಕರಲ್ಲಿ 96 ಪ್ರತಿಶತದಷ್ಟು ಜನರು ಮತ ಚಲಾಯಿಸಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ.

ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಸ್ವರ್ಧೆಯಲ್ಲಿ ಮುಂಚೂಣಿಯಲ್ಲಿದ್ದಾರೆ. ಚುನಾವಣೆಯಲ್ಲಿ 9,915 ಪ್ರತಿನಿಧಿ ಗಳ ಪೈಕಿ 9,497 ಪ್ರತಿನಿಧಿಗಳು ಮತ ಚಲಾಯಿಸಿದ್ದಾರೆ. ಶೇ 96ರಷ್ಟು ಮತದಾನ ನಡೆದಿದೆ ಎಂದು ಕಾಂಗ್ರೆಸ್ ಮತದಾನದ ದಿನ ತಿಳಿಸಿತ್ತು.

ಮಲ್ಲಿಕಾರ್ಜನ ಖರ್ಗೆ ಗಾಂಧಿ ಕುಟುಂಬವನ್ನು ಪ್ರತಿನಿಧಿಸುತ್ತಾರೆ ಎಂಬ ಆರೋಪ ಗಳನ್ನು ಕಾಂಗ್ರೆಸ್ ಕಟುವಾಗಿ ನಿರಾಕರಿಸಿದೆ.

ಮಲ್ಲಿಕಾರ್ಜನ ಖರ್ಗೆ ಮತ್ತು ಶಶಿ ತರೂರ್ ಇಬ್ಬರೂ ಗಾಂಧಿಗಳು ಚುನಾವಣೆಯ ಬಗ್ಗೆ ತಟಸ್ಥರಾಗಿದ್ದಾರೆ ಎಂದು ಸಮರ್ಥಿಸಿಕೊಂಡಿದ್ದಾರೆ. ಮತ ಚಲಾಯಿಸಿ ಪ್ರತಿಕ್ರಿಯಿಸಿದ್ದ ಸೋನಿಯಾ ಗಾಂಧಿ, ‘ಈ ಸಮಯಕ್ಕಾಗಿ ಬಹಳ ದಿನಗಳಿಂದ ಕಾಯುತ್ತಿದೆ’ ಎಂದು ತಿಳಿಸಿದ್ದರು.ಶಶಿ ತರೂರ್ ಅವರ ನಾಮನಿರ್ದೇಶನಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ, ತಿರುವನಂತಪುರಂ ಸಂಸದರ ಬಗ್ಗೆ ಉದ್ದೇಶಪೂರ್ವಕವಾಗಿ ತಪ್ಪು ಮಾಹಿತಿ ಹರಡಲಾಗಿದೆ ಎಂದು ತಿಳಿಸಿದ್ದರು.

2014 ಮತ್ತು 2019 ರ ಸಾರ್ವತ್ರಿಕ ಚುನಾವಣೆಗಳಲ್ಲಿ ಪಕ್ಷದ ಸತತ ಎರಡು ಸೋಲಿನ ಜವಾಬ್ದಾರಿಯನ್ನು ಹೊತ್ತುಕೊಂಡು ರಾಹುಲ್ ಗಾಂಧಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಾಗ ಸೋನಿಯಾ ಗಾಂಧಿ ಪಕ್ಷವನ್ನು ತಾತ್ಕಾಲಿಕವಾಗಿ ಮುನ್ನಡೆಸಲು ಒಪ್ಪಿಕೊಂಡಿದ್ದರು. ಇದಾದ ಮೂರು ವರ್ಷಗಳ ನಂತರ ಚುನಾವಣೆ ನಡೆದಿದೆ.