ತುಮಕೂರು : ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷೆ ಜಯಶ್ರೀ ಅವರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಕ್ಕಳ ರಕ್ಷಣಾ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಶಿಕ್ಷಣ, ಸಮಾಜ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆಗಳು ಸೇರಿದಂತೆ ಮಕ್ಕಳಿಗೆ ಸಂಬಂಧಿಸಿದ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಬೇಕಾದ ಪೌಷ್ಟಿಕಾಹಾರ, ಶುದ್ಧ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಸಮರ್ಪಕವಾಗಿ ಒದಗಿಸಬೇಕು ಎಂದು ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗೆ ಅವರು ಸೂಚಿಸಿದರು.
ಶಾಲೆಗಳಲ್ಲಿ ಮಕ್ಕಳಿಗೆ ಶೌಚಾಲಯ, ಬಿಸಿ ಊಟ, ಸಮವಸ್ತç, ಬೈಸಿಕಲ್ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವುದರೊಂದಿಗೆ ಪಠ್ಯದ ಜೊತೆಗೆ ಪಠ್ಯೇತರ ಚಟುಚಟಿಕೆಗಳಲ್ಲಿ ಮಕ್ಕಳನ್ನು ತೊಡಗಿಸಬೇಕು. ನೈತಿಕತೆಯನ್ನು ಬೆಳೆಸು ವಂತಹ ಕೆಲಸ ಶಿಕ್ಷಕ ಸಮೂಹದಿಂದಾಗಬೇಕು ಈ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕಿದೆ ಎಂದು ತಿಳಿಸಿದರು.
ಪೊಕ್ಸೊ ಕಾಯ್ದೆಯಡಿ ದಾಖಲಾಗುವ ಪ್ರಕರಣಗಳನ್ನ ಅತ್ಯಂತ ಗಂಭೀರವಾಗಿ ಪರಿಗ ಣಿಸಬೇಕು. ಸಂತ್ರಸ್ತರಿಗೆ ಬೇಕಾದ ವೈದ್ಯಕೀಯ ಚಿಕಿತ್ಸೆ, ಸಮಾಲೋಚನೆ, ಉಚಿತ ಕಾನೂನು ನೆರವು, ಪುನರ್ವಸತಿ ಸೇರಿದಂತೆ ಅಗತ್ಯ ನೆರವು ನೀಡುವ ಮೂಲಕ ಸಂತ್ರಸ್ತರಿಗೆ ನ್ಯಾಯ ದೊರಕುವಂತಾಗಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀಧರ್ ಅವರಿಗೆ ಸೂಚಿಸಿದರು.
ಸಭೆಯಲ್ಲಿ ನ್ಯಾಯಧೀಶರಾದ ನೂರುನ್ನೀಸ, ಸಿಇಒ ಡಾ.ಕೆ ವಿದ್ಯಾಕುಮಾರಿ, ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಉಪವಿಭಾಗಾ ಧಿಕಾರಿ ವಿ. ಅಜಯ್ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.