ಬೆಂಗಳೂರು:
ರಾಜ್ಯದಲ್ಲಿ ಕರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಶುಕ್ರವಾರ ಒಂದೇ ದಿನ ಬರೋಬ್ಬರಿ 57 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 544ಕ್ಕೇರಿಕೆಯಾಗಿದೆ.
ಕರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 29 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 57 ಮಂದಿ ಸಾವನ್ನಪ್ಪಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ ಸುಧಾಕರ್ ಅವರು ತಿಳಿಸಿದ್ದಾರೆ.
ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 1447 ಪ್ರಕರಣಗಳು ಸೇರಿದಂತೆ ರಾಜ್ಯದಲ್ಲಿ ಒಟ್ಟು 2,313 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರಿಂದ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 33,418ಕ್ಕೇರಿಕೆಯಾಗಿದೆ ಎಂದು ಸಚಿವರು ಹೇಳಿದ್ದಾರೆ.
ಇನ್ನು ರಾಜ್ಯದಲ್ಲಿ ಚೇತರಿಕೆಯ ಪ್ರಮಾಣ ಕೂಡ ಉತ್ತಮವಾಗಿದ್ದು, ಶುಕ್ರವಾರ ಒಂದೇ ದಿನ 1004 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 472 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೆ ಬೆಂಗಳೂರಿನಲ್ಲಿ 601 ಮಂದಿ ಡಿಸ್ಚಾರ್ಜ್ ಆಗಿದ್ದಾರೆ . ಈವರೆಗೆ ಒಟ್ಟು 13836 ಮಂದಿ ಕರೋನಾ ಮುಕ್ತರಾಗಿ ಆಸ್ಪತ್ರೆಯಿಂದ ಹೊರಬಂದಿದ್ದಾರೆ.
ದಕ್ಷಿಣ ಕನ್ನಡ- 139, ವಿಜಯಪುರ 89, ಬಳ್ಳಾರಿ 66, ಕಲಬುರಗಿ 58, ಯಾದಗಿರಿ 51, ಮೈಸೂರು 51, ಧಾರವಾಡ- 50, ಹಾವೇರಿ 42, ಉಡುಪಿ 34, ಉತ್ತರ ಕನ್ನಡ 33, ಮಂಡ್ಯ 31, ರಾಯಚೂರು 25, ರಾಮನಗರ 23, ದಾವಣಗೆರೆ 21, ಬೀದರ್ 19, ಗದಗ 19, ಬೆಳಗಾವಿ 15, ಚಿಕ್ಕಬಳ್ಳಾಪುರ 12, ತುಮಕೂರು 10, ಕೋಲಾರ 9, ಚಾಮರಾಜನಗರ 9, ಕೊಪ್ಪಳ 7, ಹಾಸನ 6, ಶಿವಮೊಗ್ಗ 6, ಬಾಗಲಕೋಟೆ 6, ಬೆಂಗಳೂರು ಗ್ರಾಮಾಂತರ ಹಾಗೂ ಚಿಕ್ಕಮಗಳೂರಿನಲ್ಲಿ ತಲಾ ಒಂದೊಂದು ಪ್ರಕರಣ ಪತ್ತೆಯಾಗಿವೆ.
|
|