Monday, 25th November 2024

ಸ್ವಾವಲಂಬಿ ಭಾರತದ ಹಾದಿಯಲ್ಲಿ ಮುನ್ನಡೆಯುತ್ತಿದ್ದೇವೆ: ನರೇಂದ್ರ ಮೋದಿ

ವದೆಹಲಿ: ಕಳೆದ 8 ವರ್ಷಗಳಲ್ಲಿ ಕೈಗೊಂಡ ಸುಧಾರಣೆಗಳಿಂದಾಗಿ ಈ ಸಾಧನೆ ಮಾಡಿದ್ದೇವೆ. ನಮ್ಮ ಕರ್ಮಯೋಗಿಗಳ ಶ್ರಮದಿಂದ ಸರ್ಕಾರಿ ಇಲಾಖೆ ಗಳ ದಕ್ಷತೆ ಹೆಚ್ಚಾಗಿದೆ. ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡಬೇಕೆಂಬ ಸಂಕಲ್ಪ ಈಡೇರಿಸಲು ಸ್ವಾವಲಂಬಿ ಭಾರತದ ಹಾದಿಯಲ್ಲಿ ಮುನ್ನಡೆಯುತ್ತಿದ್ದೇವೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್​ ಮೂಲಕ ರೋಜ್‌ಗಾರ್ ಮೇಳಕ್ಕೆ ಶನಿವಾರ ಚಾಲನೆ ನೀಡಿದ್ದಾರೆ. 10 ಲಕ್ಷ ಸಿಬ್ಬಂದಿ ಯನ್ನು ನೇಮಕಾತಿ ಮಾಡುವ ಅಭಿಯಾನ ಇದಾಗಿದೆ. ಈ ಸಮಾರಂಭದಲ್ಲಿ ಮೊದಲ ಹಂತದಲ್ಲಿ ಹೊಸದಾಗಿ ಸೇರ್ಪಡೆಗೊಂಡ 75 ಸಾವಿರ ಮಂದಿಗೆ ನೇಮಕಾತಿ ಪತ್ರ ವಿತರಿಸಲಾಗುತ್ತದೆ.

ಕೇಂದ್ರ ರಕ್ಷಣಾ ಇಲಾಖೆ, ರೈಲ್ವೆ ಇಲಾಖೆ, ಅಂಚೆ, ಗೃಹ ಇಲಾಖೆ, ಕಾರ್ಮಿಕ ಇಲಾಖೆ, ಸಿಬಿಐ, ಬ್ಯಾಂಕಿಂಗ್ ಕ್ಷೇತ್ರದ ಉದ್ಯೋಗಿ ಗಳಿಗೆ ನೇಮಕಾತಿ ಪತ್ರ ನೀಡಲಾಗುತ್ತದೆ. ನೇಮಕಗೊಂಡವರು ಎ, ಬಿ ಮತ್ತು ಸಿ ಹಂತಗಳಲ್ಲಿ ಸರ್ಕಾರಕ್ಕೆ ಸೇರುತ್ತಾರೆ. ನೇಮಕಾತಿ ಗಳನ್ನು ಮಾಡಲಾಗುತ್ತಿರುವ ಹುದ್ದೆಗಳಲ್ಲಿ ಕೇಂದ್ರ ಸಶಸ್ತ್ರ ಪಡೆ ಸಿಬ್ಬಂದಿ, ಸಬ್ ಇನ್ಸ್‌ಪೆಕ್ಟರ್, ಕಾನ್ಸ್‌ಟೇಬಲ್, ಎಲ್‌ಡಿಸಿ, ಸ್ಟೆನೋ, ಪಿಎ, ಆದಾಯ ತೆರಿಗೆ ಇನ್ಸ್‌ಪೆಕ್ಟರ್‌ಗಳು ಮತ್ತು ಎಂಟಿಎಸ್ ಕೂಡ ಸೇರಿವೆ.