ಬೆಂಗಳೂರು:
ಜೆಡಿಎಸ್ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರನ್ನು ಉದ್ದೇಶಿಸಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಗುರುವಾರ ಪತ್ರ ಬರೆದಿದ್ದಾರೆ.
ಕರೋನಾ ಸಂಕಷ್ಟ ಸಮಯದಲ್ಲೂ ಮುಂಬರುವ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಸಕ್ರಿಯರಾಗುವಂತೆ ಮನವಿ ಮಾಡಿಕೊಂಡಿದ್ದಾರೆ.
ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರಕಾರಗಳು ಕೈಗೊಳ್ಳುವ ಬಡವರ ವಿರೋಧಿ, ರೈತ ವಿರೋಧಿ ನಿರ್ಧಾರಗಳ ವಿರುದ್ಧ ಹೋರಾಟ ನಡೆಸಬೇಕು. ಜಾತ್ಯತೀತತೆ, ಸಾಮಾಜಿಕ ನ್ಯಾಯ, ಪ್ರಾದೇಶಿಕತೆ ಇವುಗಳಲ್ಲಿ ನಮ್ಮ ಪಕ್ಷ ಕಾಂಗ್ರೆಸ್ ಮತ್ತು ಬಿಜೆಪಿ ಎರಡು ರಾಷ್ಟ್ರೀಯ ಪಕ್ಷಗಳಿಗಿಂತ ಹೇಗೆ ಅನಿವಾರ್ಯ ಎಂಬುದನ್ನು ತಿಳಿಸುವ ಕೆಲಸ ಮಾಡಬೇಕು ಎಂದು ತಿಳಿಸಿದ್ದಾರೆ.