Monday, 6th January 2025

ರಾಜೀವ್ ಗಾಂಧಿ ಫೌಂಡೇಶನ್, ಚಾರಿಟಬಲ್ ಟ್ರಸ್ಟ್ ಪರವಾನಗಿ ರದ್ದು

ವದೆಹಲಿ: ವಿದೇಶಿ ಕೊಡುಗೆಗಳಲ್ಲಿನ ಅಕ್ರಮಗಳ ಆರೋಪದ ಮೇಲೆ ಗಾಂಧಿ ಕುಟುಂಬಕ್ಕೆ ಸಂಬಂಧಿಸಿದ ಸರ್ಕಾರೇತರ ಸಂಸ್ಥೆಗಳಾದ ರಾಜೀವ್ ಗಾಂಧಿ ಫೌಂಡೇಶನ್ (ಆರ್‌ಜಿಎಫ್) ಮತ್ತು ರಾಜೀವ್ ಗಾಂಧಿ ಚಾರಿಟಬಲ್ ಟ್ರಸ್ಟ್ (ಆರ್‌ಜಿಸಿಟಿ) ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ (ಎಫ್‌ಸಿಆರ್‌ಎ) ಪರವಾನಗಿಯನ್ನು ಕೇಂದ್ರವು ರದ್ದುಗೊಳಿಸಿದೆ.

ಅಕ್ರಮಗಳ ತನಿಖೆಯನ್ನು ಕೇಂದ್ರ ತನಿಖಾ ಸಂಸ್ಥೆ ಸಿಬಿಐಗೆ ವಹಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ರಾಜೀವ್ ಗಾಂಧಿ ಫೌಂಡೇಶನ್‌ನ ಮುಖ್ಯಸ್ಥರಾಗಿದ್ದಾರೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಸದಸ್ಯರು.

ಸೋನಿಯಾ ಗಾಂಧಿ ಅವರು ರಾಜೀವ್ ಗಾಂಧಿ ಚಾರಿಟಬಲ್ ಟ್ರಸ್ಟ್ ಮುಖ್ಯಸ್ಥರಾಗಿದ್ದಾರೆ. ರಾಹುಲ್ ಗಾಂಧಿ ಮತ್ತು ಮಾಜಿ ರಾಜ್ಯಸಭಾ ಸಂಸದ ಡಾ ಅಶೋಕ್ ಎಸ್. ಗಂಗೂಲಿ ಇತರರ ಸದಸ್ಯರಾಗಿದ್ದಾರೆ. ಗಾಂಧಿ ಕುಟುಂಬ ನಡೆಸುತ್ತಿರುವ ಎನ್‌ಜಿಒ ಗಳಲ್ಲಿ ಆಪಾದಿತ ಅಕ್ರಮಗಳ ಕುರಿತು ತನಿಖೆ ನಡೆಸಲು ಗೃಹ ಸಚಿವಾಲಯವು 2020 ರಲ್ಲಿ ರಚಿಸಿದ ಅಂತರ-ಸಚಿವಾಲಯ ಸಮಿತಿಯು ನಡೆಸಿದ ತನಿಖೆಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

1991ರಲ್ಲಿ ರಾಜೀವ್ ಗಾಂಧಿ ಫೌಂಡೇಶನ್ ಅನ್ನು ಸ್ಥಾಪಿಸಲಾಯಿತು. ಅದರ ವೆಬ್‌ಸೈಟ್ ಹೇಳುವಂತೆ ಇದು ಶಿಕ್ಷಣ ಕ್ಷೇತ್ರದಲ್ಲೂ ಕೆಲಸ ಮಾಡಿದೆ.