Monday, 25th November 2024

‘ಒಂದು ರಾಷ್ಟ್ರ, ಒಂದು ಸಮವಸ್ತ್ರ’: ಪ್ರಧಾನಿ ಮೋದಿ ಪ್ರಸ್ತಾಪ

ಸೂರಜ್ಕುಂಡ್ (ಹರಿಯಾಣ): ಪೊಲೀಸರಿಗೆ ‘ಒಂದು ರಾಷ್ಟ್ರ, ಒಂದು ಸಮವಸ್ತ್ರ’ ಕಲ್ಪನೆಯನ್ನು ಪ್ರಧಾನಿ ಮೋದಿ ಪ್ರಸ್ತಾಪಿಸಿದ್ದಾರೆ.
ಇದು ಕೇವಲ ಸಲಹೆಯಾಗಿದ್ದು, ಅದನ್ನು ರಾಜ್ಯಗಳ ಮೇಲೆ ಹೇರಲು ಬಯಸುವುದಿಲ್ಲ ಎಂದಿದ್ದಾರೆ. ರಾಜ್ಯ ಗೃಹ ಮಂತ್ರಿಗಳ “ಚಿಂತನ್ ಶಿಬಿರ” ವನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಅಪರಾಧಗಳು ಮತ್ತು ಅಪರಾಧಿಗಳನ್ನು ನಿಭಾಯಿಸಲು ರಾಜ್ಯಗಳ ನಡುವೆ ನಿಕಟ ಸಹಕಾರದ ಅಗತ್ಯವನ್ನು ಒತ್ತಿ ಹೇಳಿದರು.
ಸಹಕಾರಿ ಒಕ್ಕೂಟವು ಸಂವಿಧಾನದ ಭಾವನೆ ಮಾತ್ರವಲ್ಲದೆ ರಾಜ್ಯಗಳು ಮತ್ತು ಕೇಂದ್ರದ ಜವಾಬ್ದಾರಿಯಾಗಿದೆ ಎಂದು ಹೇಳಿದರು. ಪೊಲೀಸರಿಗೆ ‘ಒಂದು ರಾಷ್ಟ್ರ, ಒಂದು ಸಮ ವಸ್ತ್ರ’ವು ಕೇವಲ ಆಲೋಚನೆಯಾಗಿದೆ.

ಆಲೋಚನೆ ಮಾಡಿ ಮನಸ್ಸು ಮಾಡಿದರೆ ಜಾರಿಗೆ ತರಬಹುದು. ಇದು 5, 50, ಅಥವಾ 100 ವರ್ಷಗಳಲ್ಲಿ ಆಗಬಹುದು. ಸ್ವಲ್ಪ ಯೋಚಿಸಿ ಎಂದಷ್ಟೇ ಹೇಳಿದರು. ದೇಶದಾ ದ್ಯಂತ ಪೊಲೀಸರ ಗುರುತು ಒಂದೇ ಆಗಿದ್ದರೆ ಚೆನ್ನಾಗಿರುತ್ತದೆ ಎಂದು ಆಶಿಸುತ್ತೇನೆ ಎಂದರು.

ಕಾನೂನು ಮತ್ತು ಸುವ್ಯವಸ್ಥೆ ಮತ್ತು ಭದ್ರತೆಯ ಹಲವು ಸವಾಲುಗಳನ್ನು ಎದುರಿಸಲು ಪೊಲೀಸ್ ಇಲಾಖೆಗೆ ಸಂಬಂಧಪಟ್ಟ ಎಲ್ಲಾ ಏಜೆನ್ಸಿಗಳು ಸಂಘಟಿತ ಕ್ರಮ ಕೈಗೊಳ್ಳಬೇಕು. ಹಳೆಯ ಕಾನೂನುಗಳನ್ನು ಪರಿಶೀಲಿಸಬೇಕು ಮತ್ತು ಪ್ರಸ್ತುತ ಸಂದರ್ಭಕ್ಕೆ ತಿದ್ದುಪಡಿ ಮಾಡಬೇಕೆಂದು ಇದೇ ಸಂದರ್ಭದಲ್ಲಿ ಪ್ರಧಾನಿ ಮೋದಿ ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿದರು.