Thursday, 12th December 2024

ಪುನೀತ್ ರಾಜಕುಮಾರ್ ಮೊದಲ ಪುಣ್ಯಸ್ಮರಣೆ ಇಂದು

ಬೆಂಗಳೂರು: ಪುನೀತ್ ರಾಜಕುಮಾರ್ ಅವರು ನಮ್ಮನ್ನ ಅಗಲಿ ಇಂದಿಗೆ ಒಂದು ವರ್ಷ.

ಇಂದು ಪುನೀತ್ ರಾಜುಕುಮಾರ್ ಅವರ ಮೊದಲ ಪುಣ್ಯಸ್ಮರಣೆ. ಹೀಗಾಗಿ ರಾಜ್ಯ ದೆಲ್ಲೆಡೆ ಯುವರಾಜ ಪುನೀತ್ ರಾಜಕುಮಾರ್ ಅವರನ್ನು ನೆನೆದು ನಮನ ಸಲ್ಲಿಸಲಾಗು ತ್ತಿದೆ.

ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಟ್ವೀಟ್ ಮಾಡುವ ಮೂಲಕ ನಮನ ಸಲ್ಲಿಸಿದ್ದಾರೆ.

“ಬಾಲನಟನಾಗಿ ಚಿತ್ರರಂಗ ಪ್ರವೇಶಿಸಿ, ಪವರ್ ಸ್ಟಾರ್ ಆಗಿ ಕನ್ನಡಿಗರ ಜನಮಾನಸದಲ್ಲಿ ಶಾಶ್ವತ ಸ್ಥಾನ ಪಡೆದಿರುವ ಪ್ರೀತಿಯ ಅಪ್ಪು, ಡಾ. ಪುನೀತ್ ರಾಜಕುಮಾರ್ ರವರ ಪುಣ್ಯಸ್ಮರಣೆಯಂದು ಅವರಿಗೆ ಪ್ರೀತಿ ಪೂರ್ವಕ ನಮನಗಳು” ಎಂದು ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ಪುನೀತ್ ರಾಜುಕುಮಾರ್ ಅವರ ಮೊದಲ ಪುಣ್ಯಸ್ಮರಣೆಯಾದ ಇಂದು ನಾಡಿನೆಲ್ಲೆಡೆ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಕಂಠೀರವ ಸ್ಟೇಡಿಯಮ್‌ನಲ್ಲಿ ಗೀತನಮನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಗಾನನಮನ ಮೂಲಕ ಅಪ್ಪುಗೆ ನಮನ ಸಲ್ಲಿಸಲಾಗುತ್ತಿದೆ. ಕಳೆದ ರಾತ್ರಿಯಿಂದಲೇ ಕಾರ್ಯಕ್ರಮ ಆಯೋಜಿಸಲಾಗಿದ್ದು ಈ ದಿನ ಪೂರ್ತಿ ಕಾರ್ಯಕ್ರಮ ನಡೆಯಲಿದೆ.

ಇಂದು ಕಂಠೀರವ ಸ್ಟೇಡಿಯಮ್‌ಗೆ ಬರುವ ಅಭಿಮಾನಿಗಳ ಸಂಖ್ಯೆ ಹೆಚ್ಚಾಗಲಿದ್ದು ಪೊಲೀಸ್ ಬಿಗ್ ಬಂದೋಬಸ್ತ್ ಮಾಡಲಾ ಗಿದೆ.

ಕಂಠೀರವ ಸ್ಟುಡಿಯೊ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್
ಪ್ರಥಮ ವರ್ಷದ ಪುಣ್ಯತಿಥಿ ಹಿನ್ನೆಲೆಯಲ್ಲಿ ಪುನೀತ್ ಸಮಾಧಿ ಸ್ಥಳ ಬೆಂಗಳೂರಿನ ಕಂಠೀರವ ಸ್ಟುಡಿಯೊದಲ್ಲಿ ಇನ್ನು ಕೆಲವೇ ಹೊತ್ತಿನಲ್ಲಿ ಕುಟುಂಬಸ್ಥರು ಪೂಜೆ, ಶಾಸ್ತ್ರ ನೆರವೇರಿಸಲಿದ್ದಾರೆ. ಅಪ್ಪುಗೆ ಇಷ್ಟವಾದ ತಿಂಡಿ, ತಿನಿಸುಗಳನ್ನು ಇಟ್ಟು ಕುಟುಂಬ ಸ್ಥರು ಸಮಾಧಿ ಮುಂದೆ ಪೂಜೆ ಮಾಡಲಿದ್ದಾರೆ.

ಕಂಠೀರವ ಸ್ಟುಡಿಯೊ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಅಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು ಇಂದು ಆಗಮಿಸುವ ಸಾಧ್ಯತೆಯಿದ್ದು ಪುಣ್ಯತಿಥಿ ಹಿನ್ನೆಲೆಯಲ್ಲಿ ಆಗಮಿಸುವವರಿಗೆ ಉಪಹಾರ, ಊಟ, ನೀರಿನ ವ್ಯವಸ್ಥೆ ಏರ್ಪಡಿಸಲಾಗಿದೆ.

ಇಂದು ಬೆಳಿಗ್ಗೆ ಕುಟುಂಬದವರು ಸಮಾಧಿಗೆ ಬರಲಿದ್ದಾರೆ. ಸಮಾಧಿ ಬಳಿ ಪುನೀತ್​​ಗೆ ಇಷ್ಟವಾದ ತಿನಿಸುಗಳನ್ನಿಟ್ಟು ಪೂಜೆ ಮಾಡಲಿದ್ದಾರೆ.

ಅಪ್ಪು ಸಮಾಧಿಗೆ ಪೂಜೆ ಮಾಡಿದ ನಂತರದಲ್ಲಿ ಕುಟುಂಬ ಮನೆಗೆ ಮರಳಲಿದೆ. ಅಲ್ಲಿಯೂ ಪೂಜೆ ಇರಲಿದೆ. ವರ್ಷದ ಕಳಸ ಪೂಜೆಯನ್ನು ಕುಟುಂಬ ಮಾಡಲಿದೆ. ಬಳಿಕ ಬಂಧು ಬಳಗಕ್ಕೆ ಭೋಜನ ವ್ಯವಸ್ಥೆ ಇರಲಿದೆ.