Saturday, 14th December 2024

ಪ್ರಧಾನಮಂತ್ರಿ ಸ್ವಾನಿಧಿ ಯೋಜನೆ ಪ್ರಮಾಣಪತ್ರ ವಿತರಣೆ

ಕೊಲ್ಹಾರ: ಬೀದಿ ಬದಿಯ ವ್ಯಾಪಾರಿಗಳಿಗೆ ಅನುಕೂಲಕರ ದೃಷ್ಟಿಯಿಂದ ಕೇಂದ್ರ ಸರಕಾರ ಪ್ರಧಾನಮಂತ್ರಿ ಸ್ವಾನಿಧಿ ಯೋಜನೆ ಜಾರಿಗೆ ತಂದಿದ್ದು ಅರ್ಹರು ಈ ಸೌಲಭ್ಯ ಪಡೆದು ಸ್ವಾವಲಂಬಿಗಳಾಗಬಹುದು ಎಂದು ಪ.ಪಂ ಮುಖ್ಯಾಧಿಕಾರಿ ವಿರೇಶ ಹಟ್ಟಿ ಹೇಳಿದರು.

ಪಟ್ಟಣ ಪಂಚಾಯತ್ ಕಾರ್ಯಾಲಯದಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಪ್ರಧಾನಮಂತ್ರಿ ಸ್ವಾನಿಧಿ ಯೋಜನೆಯ 2020-21 ನೇಯ ಸಾಲಿನ ಪ್ರಮಾಣಪತ್ರಗಳನ್ನು ವಿತರಿಸಿ ಅವರು ಮಾತನಾಡಿದರು.

ಈ ಯೋಜನೆಯಡಿ ಬೀದಿಬದಿಯ ವ್ಯಾಪಾರಿಗಳಿಗೆ ₹10 ಸಾವಿರ ಸಾಲ ಸಿಗಲಿದ್ದು, ಇದನ್ನು ಒಂದು ವರ್ಷದ ಮಾಸಿಕ ಕಂತುಗಳಲ್ಲಿ ತೀರಿಸಬೇಕಾಗುತ್ತದೆ. ಪೂರಕ ದಾಖಲೆಗಳನ್ನು ಸಲ್ಲಿಸುವ ಬೀದಿಬದಿಯ ವ್ಯಾಪಾರಿಗಳು ಈ ಯೋಜನೆಯ ಸೌಲಭ್ಯ ಪಡೆಯಲು ಅರ್ಹರು ಎಂದು ಅವರು ಹೇಳಿದರು.