Friday, 7th May 2021

ಆಸಿಡ್ ಸಾಗಿಸುತ್ತಿದ್ದ ಲಾರಿ ಪಲ್ಟಿ: ನಾಲ್ಕು ಮಂದಿ ದುರ್ಮರಣ

ಹಾಸನ: ಭೀಕರ ರಸ್ತೆ ಅಪಘಾತದಲ್ಲಿ ಆಸಿಡ್ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆಯ ಅರಕಲಗೋಡು ತಾಲೂಕಿನಲ್ಲಿ ಘಟನೆ ಸಂಭವಿಸಿದೆ.

ಬಸವನಹಳ್ಳಿ ಬಳಿ ಅಪಘಾತ ಸಂಭವಿಸಿದ್ದು, ಲಾರಿ ಪಲ್ಟಿಯಾಗಿ ಆಸಿಡ್ ಚೆಲ್ಲಿದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ. ಇಬ್ಬರು ಸಜೀವ ದಹನಗೊಂಡಿದ್ದಾರೆ. ಓರ್ವ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು.

Leave a Reply

Your email address will not be published. Required fields are marked *