Tuesday, 26th October 2021

ಬಂಟ್ವಾಳದಲ್ಲಿ ಸರಣಿ ಅಪಘಾತ: ಚಾಲಕ, ಬೈಕ್ ಸವಾರನಿಗೆ ಗಾಯ

ಬಂಟ್ವಾಳ:ಕೊಡಾಜೆಯಲ್ಲಿ ಶುಕ್ರವಾರ ಬೆಳಗ್ಗೆ ಮೂರು ವಾಹನಗಳ ನಡುವೆ ಅಪಘಾತ ಸಂಭವಿಸಿ, ಇಬ್ಬರು ಗಂಭೀರ ಗಾಯ ಗೊಂಡಿದ್ದಾರೆ.

ಪುತ್ತೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಲಾರಿ ಮತ್ತು ಮಾಣಿಯಿಂದ ಪುತ್ತೂರಿಗೆ ತೆರಳುತ್ತಿದ್ದ ಟಾಟಾ ಏಸ್ ವಾಹನ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಈ ವೇಳೆ ಟಾಟಾ ಏಸ್ ವಾಹನದ ಹಿಂದಿನಿಂದ ಬರುತ್ತಿದ್ದ ಬೈಕ್ ಟಾಟಾ ಏಸ್‌ಗೆ ಢಿಕ್ಕಿಯಾಗಿದೆ. ಘಟನೆಯಲ್ಲಿ ಟಾಟಾ ಏಸ್ ಚಾಲಕ ಮತ್ತು ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಅಪಘಾತದಿಂದ ಸ್ಥಳದಲ್ಲಿ ಕೆಲವು ಹೊತ್ತು ಸಂಚಾರ ಅಸ್ತವ್ಯಸ್ತವಾಗಿತ್ತು. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *