ಶಿವಮೊಗ್ಗ: ಕ್ಯಾಂಟರ್ ಪಲ್ಟಿಯಾಗಿ ಎಂಟು ಎತ್ತು ಹಾಗೂ ಎಮ್ಮೆಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ.
ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿ ಸಮೀಪ ಈ ಘಟನೆ ನಡೆದಿದ್ದು, ಸ್ಥಳೀಯರು ಹಾಗೂ ಪೊಲೀಸರ ತುರ್ತು ಕಾರ್ಯಚರಣೆ ಯಿಂದ 6 ಗೋವುಗಳ ರಕ್ಷಣೆ ಮಾಡಲಾಗಿದೆ.
ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಕ್ಯಾಂಟರ್ ವಾಹನ ದಾವಣಗೆರೆಯಿಂದ ಮಂಗಳೂರಿಗೆ ತೆರಳುತ್ತಿತ್ತು. ಘಟನೆಯಲ್ಲಿ ಕ್ಯಾಂಟರ್ ಚಾಲಕ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.