Monday, 5th December 2022

ಸೇನೆ ಅವಮಾನಿಸುವ ಟ್ವೀಟ್‌: ನಟಿ ರಿಚಾ ಚಡ್ಡಾ ಕ್ಷಮೆಯಾಚನೆ

ವದೆಹಲಿ: ಪಾಕ್‌ ಆಕ್ರಮಿತ ಕಾಶ್ಮೀರ ವಶಕ್ಕೆ ಸೇನೆ ಸಿದ್ಧವಾಗಿದೆ ಎಂಬ ಸೇನಾ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಹೇಳಿಕೆ ವಿಚಾರವಾಗಿ ಸೇನೆಯನ್ನು ಅವಮಾನಿಸುವ ರೀತಿಯಲ್ಲಿ ಟ್ವೀಟ್‌ ಮಾಡಿದ್ದ ಬಾಲಿವುಡ್‌ ನಟಿ ರಿಚಾ ಚಡ್ಡಾ, ಪೋಸ್ಟ್‌ ಡಿಲೀಟ್‌ ಮಾಡಿ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿ ದ್ದಾರೆ.

 ರಿಚಾ, ‘ಗಲ್ವಾನ್‌ ಹಾಯ್‌ ಎನ್ನುತ್ತಿದೆ’ ಎಂಬುದಾಗಿ ಟ್ವೀಟ್‌ ಮಾಡಿ ಎಲ್ಲರ ಆಕ್ರೋಶಕ್ಕೆ ತುತ್ತಾಗಿದ್ದರು.

ಸೇನಾ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಹೇಳಿಕೆಯನ್ನು ಹಂಚಿಕೊಂಡು, ‘ಗಲ್ವಾನ್‌ ಹಾಯ್‌ ಎನ್ನುತ್ತಿದೆ’ ಎಂಬುದಾಗಿ ಬರೆದುಕೊಂಡಿದ್ದರು. ಇದರಿಂದ ಆಕ್ರೋಶಗೊಂಡ ನೆಟ್ಟಿಗರು ಇಂತಹ ಹೇಳಿಕೆ ನೀಡಲು ನಾಚಿಕೆಯಾಗಬೇಕು ಎಂದು ಪ್ರತಿಕ್ರಿಯಿಸಿದ್ದರು.