Wednesday, 1st February 2023

ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಂಜನಾದ್ರಿ ಅಭಿವೃದ್ಧಿ

ಕೊಪ್ಪಳ : ಹನುಮ ಹುಟ್ಟಿದ್ದು ಅಂಜನಾದ್ರಿಯಲ್ಲಿಯೇ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕೃತ ಹೇಳಿದರು.
ಗಂಗಾವತಿ ತಾಲೂಕಿನ ಅಂಜನಾದ್ರಿ ಪರ್ವತಕ್ಕೆ ಭೇಟಿ ನೀಡುವ ಮುನ್ನ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಅಂಜನಾದ್ರಿ ಕ್ಷೇತ್ರವು ಐತಿಹಾಸಿಕ ವಾಗಿ ಕಿಷ್ಕಿಂದದಲ್ಲಿ ಇರುವುದರಿಂದ ಹನುಮ ಜನ್ಮಸ್ಥಳ ಅಂಜನಾದ್ರಿ ಆಗಿದೆ. ಸಾವಿರ ಬಾರಿ ಹೇಳುವೆ. ಇದರಲ್ಲಿ ಯಾವುದೇ ಗೊಂದಲ ಬೇಕಾಗಿಲ್ಲ ಎಂದು ಸ್ಪಷ್ಟಪಡಿಸಿದರು.
ಸಾವಿರಾರು ವರ್ಷಗಳ ಇತಿಹಾಸ ಇದೆ. ವಿವಾದ ಹಾಗೂ ಚರ್ಚೆಗೆ ಅವಕಾಶ ಇಲ್ಲ. ನಮ್ಮ ನಂಬಿಕೆಯೇ ಘೋಷಣೆ. ವಿವಾದ ಬೇಕಾಗಿಲ್ಲ. ಭಾರತದ ಜನರೇ ನಂಬಿದ್ದು, ಪರ್ವತಕ್ಕೆ ಬರುತ್ತಿದ್ದಾರೆ ಎಂದರು.
ನಮ್ಮೆಲ್ಲರ ಆರಾಧ್ಯ ದೈವ ಅಂಜನಾದ್ರಿ ಅಭಿವೃದ್ಧಿ ಗೆ ಸರ್ಕಾರ ಬದ್ಧ. ಬಜೆಟ್ ನಲ್ಲಿ ಘೋಷಿಸಿದಂತೆ 100 ಕೋಟಿ ರೂ. ನೀಡಿ ದ್ದೇನೆ. ಯಾತ್ರಾ ಸ್ಥಳ ಹಾಗೂ ಮೂಲಸೌಕರ್ಯ ಕಲ್ಪಿಸಲಾಗುವುದು ಎಂದರು. ರಾಷ್ಟ್ರೀಯ ಮಟ್ಟದಲ್ಲಿ ಅಂಜನಾದ್ರಿ ಅಭಿವೃದ್ಧಿ ಮಾಡ ಲಾಗುವುದು. ಮುಂಬರುವ ದಿನಗಳಲ್ಲಿ ಇನ್ನಷ್ಟು ಅನುದಾನ ಒದಗಿಸಲಾಗುವುದು.
ಅಭಿವೃದ್ಧಿಗೆ ಮಾಸ್ಟರ್ ಫ್ಲಾನ್ ರೂಪಿಸಲಾಗಿದೆ. ಆಸ್ಪತ್ರೆ, ವಸತಿ ನಿಲಯ ಸೇರಿ ಮೂಲಸೌಕರ್ಯ. ವೃದ್ಧರಿಗೆ ಸುಲಭವಾಗಿ ಬೆಟ್ಟ ಏರಲು ಅನುಕೂಲ ಮಾಡಿ ಕೊಡಲಾಗುವುದು‌. ಮುಂದಿನ ದಿನಗಳಲ್ಲಿ ರೋಪ್ ವೇ ನಿರ್ಮಾಣಕ್ಕೆ ಟೆಂಡರ್ ಕರೆಯಲಾಗುವುದು. ಅಂಜನಾದ್ರಿ ಸೇರಿ ಸುತ್ತಲಿನ ದೇವಸ್ಥಾನ ಹಾಗೂ ಪ್ರದೇಶಗಳ ಅಭಿವೃದ್ಧಿ ಮಾಡಲಾಗುವುದು ಎಂದು ತಿಳಿಸಿದರು.
ಪುರಾತತ್ತ್ವ ಇಲಾಖೆ ವ್ಯಾಪ್ತಿಯ ಕ್ಷೇತ್ರಗಳನ್ನು ಬಿಟ್ಟು ಹಂಪಿ ಭಾಗದ ಸುತ್ತಮುತ್ತಲಿನ ಪಾರಂಪರಿಕ ತಾಣಗಳು ಮತ್ತು ಮೈಸೂ ರನ್ನು ಅಂತಾರಾಷ್ಟ್ರೀಯ ಪ್ರವಾಸೋದ್ಯಮ ಸರ್ಕ್ಯೂಟ್ ಮಾಡಲಾಗುವುದು. ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಾಗುವುದು ಎಂದರು.
ಭೂಸ್ವಾಧೀನ ಕ್ಕೆ 24 ಕೋಟಿ ರೂ. ಮೀಸಲಿಡಲಾಗಿದೆ. ರೈತರಿಗೆ ಯಾವುದೇ ರೀತಿಯಲ್ಲಿ ಅನಾನುಕೂಲ ಆಗದಂತೆ ಪರಿಹಾರ ನೀಡಲಾಗುವುದು ಎಂದರು.
ಸಚಿವರಾದ ಬೈರತಿ ಬಸವರಾಜ, ಹಾಲಪ್ಪ ಆಚಾರ್, ಡಾ‌.ಸುಧಾಕರ್, ಶಶಿಕಲಾ ಜೊಲ್ಲೆ, ಶಾಸಕ ಪರಣ್ಣ ಮುನವಳ್ಳಿ, ಬಸವರಾಜ ದಡೇಸೂಗುರು, ಜಿಲ್ಲಾಧಿಕಾರಿ ಸುಂದರೇಶ್ ಬಾಬು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಸೇರಿ ಹಲವರು ಇದ್ದರು.
error: Content is protected !!