ಇಂದಿನಿಂದ ಬೆಳಗಾವಿ ಚಳಿಗಾಲದ ಅಧಿವೇಶನ
ಗಡಿ ಜಿಲ್ಲೆ ಬೆಳಗಾವಿಯಲ್ಲಿ ಇಂದಿನಿಂದ 10 ದಿನಗಳ ಕಾಲ ನಡೆಯಲಿರುವ ಚಳಿಗಾಲದ ಅಧಿವೇಶನ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಸಚಿವರು, ಶಾಸಕರು ಭಾನುವಾರವೇ ಬೆಳಗಾವಿ ನಗರಕ್ಕೆ ಆಗಮಿಸಿದ್ದಜ ಜಿಲ್ಲಾ ಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.
-
ವಿನಾಯಕ ಮಠಪತಿ ಬೆಳಗಾವಿ
ಹತ್ತು ದಿನ ನಡೆಯಲಿರುವ ಚಳಿಗಾಲ ಅಧಿವೇಶನ
ನಗರದಾದ್ಯಂತ ಬಿಗಿ ಭದ್ರತೆ
ರಾಜಕೀಯ ನಾಯಕರು, ಅಧಿಕಾರಿಗಳಿಗೆ ೩ ಸಾವಿರ ರೂಮ್ ಬುಕ್
ಗಡಿ ಜಿಲ್ಲೆ ಬೆಳಗಾವಿಯಲ್ಲಿ ಇಂದಿನಿಂದ 10 ದಿನಗಳ ಕಾಲ ನಡೆಯಲಿರುವ ಚಳಿಗಾಲದ ಅಧಿವೇ ಶನ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಸಚಿವರು, ಶಾಸಕರು ಭಾನುವಾರವೇ ಬೆಳಗಾವಿ ನಗರಕ್ಕೆ ಆಗಮಿಸಿದ್ದಜ ಜಿಲ್ಲಾ ಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.
ಭದ್ರತೆ ದೃಷ್ಟಿಯಿಂದ ಈ ಬಾರಿ ಅಧಿವೇಶನದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಬಿಗಿ ಪೊಲೀಸ್ ಭದ್ರತೆ ಮಾಡಲಾಗಿದೆ. ೬ ಸಾವಿರಕ್ಕೂ ಅಽಕ ಪೊಲೀಸ್ ಸಿಬ್ಬಂದಿ ನಗರದಾದ್ಯಂತ ಕರ್ತವ್ಯ ನಿರ್ವಹಿಸುತ್ತಿದ್ದು ಸೂಕ್ಷ್ಮ ಪ್ರದೇಶದವಾದ ಸುವರ್ಣಸೌಧ, ಗಣ್ಯರು ಉಳಿದುಕೊಳ್ಳುವ ಖಾಸಗಿ ಸ್ಥಳಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಕಲಾಪ ನಡೆಯುವ ವಿಧಾನಸಭೆ ಹಾಗೂ ಪರಿಷತ್ ಸಭಾಂಗಣ ಪರಿಶೀಲಿಸಿದ ವಿಧಾನಸಭೆ ಕಾರ್ಯ ದರ್ಶಿ ವಿಶಾಲಾಕ್ಷಿ ಅವರು ತಯಾರಿ ವೀಕ್ಷಿಸಿದರು. ನಗರದ ಪೊಲೀಸ್ ಆಯುಕ್ತರ ಭೂಷಣ್ ಗುಲಾಬರಾವ ಭೋರಸೆ ಅವರು ಪೊಲೀಸ್ ಸಿಬ್ಬಂದಿಗಳಿಗೆ ಅಧಿವೇಶನ ಕರ್ತವ್ಯದ ಕುರಿತು ಮಾಹಿತಿ ನೀಡಿದರು.
ಇದನ್ನೂ ಓದಿ: Kiran Upadhyay Column: ಭಾವಿ ಹೀರೋಗಳಿಗೆ ಅಭಿನಂದನೆಗಳು...!
೧೨ ಸಾವಿರಕ್ಕೂ ಅಧಿಕ ಸಿಬ್ಬಂದಿ ನಿಯೋಜನೆ: ಈ ಬಾರಿಯ ಚಳಿಗಾಲ ಅಧಿವೇಶನಕ್ಕೆ ಬರೋ ಬ್ಬರಿ 12 ಸಾವಿರಕ್ಕೂ ಅಧಿಕ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ೩ ಸಾವಿರ ರೂಂ ಬುಕ್ ಮಾಡ ಲಾಗಿದ್ದು, ಎಲ್ಲರಿಗೂ ಊಟ ಹಾಗೂ ವಸತಿ ವ್ಯವಸ್ಥೆಯನ್ನು ಜಿಲ್ಲಾಡಳಿತ ಮಾಡಿಕೊಂಡಿದೆ. ಭದ್ರತೆ ದೃಷ್ಟಿಯಿಂದ ೬ ಸಾವಿರಕ್ಕೂ ಅಧಿಕ ಪೊಲೀಸ್ ಸಿಬ್ಬಂದಿ ನಿಯೋಜಿಸಿದ್ದು ನಗರದಾದ್ಯಂತ ಬಿಗಿ ಪೊಲೀಸ್ ಭದ್ರತೆ ಮಾಡಿಕೊಳ್ಳಲಾಗಿದೆ.
ಮಹಾ ನಾಯಕರಿಗೆ ನಿರ್ಬಂಧ: ಅಧಿವೇಶನ ವಿರೋಧಿಸಿ ನಾಡವಿರೋಧಿ ಎಂಇಎಸ್ ಕರಾಳ ದಿನ ಆಚರಿಸುವ ಸಾಧ್ಯತೆ ಇದ್ದು ಕಾನೂನು ಸುವ್ಯವಸ್ಥೆ ಹಿನ್ನಲೆಯಲ್ಲಿ ಮಹಾರಾಷ್ಟ್ರದ ರಾಜಕೀಯ ನಾಯಕರಿಗೆ ಬೆಳಗಾವಿ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡ ಚಕ್ ಪೋಸ್ಟ್ ಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.
ಪ್ರತಿದಿನ 15ಕ್ಕೂ ಅಧಿಕ ಪ್ರತಿಭಟನೆ
ಸುವರ್ಣಸೌಧದಲ್ಲಿ ನಡೆಯುವ ಚಳಿಗಾಲ ಅಧಿವೇಶನ ಸಂದರ್ಭದಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಜನ ತಮ್ಮ ಸಮಸ್ಯೆ ಹೊತ್ತು ಬೆಳಗಾವಿಗೆ ಆಗಮಿಸುತ್ತಾರೆ. ಡಿ. ೮ ರಿಂದ ಅಧಿವೇಶನ ಪ್ರಾರಂಭವಾಗಲಿದ್ದು ಪ್ರತಿದಿನ ೧೫ಕ್ಕೂ ಅಧಿಕ ಸಂಘಟನೆಗಳಿಂದ ಪ್ರತಿಭಟನೆ ನಡೆಯಲಿದೆ. ರೈತರ ವಿವಿಧ ಭೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬಿಜೆಪಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. ಇನ್ನೂ ಕಬ್ಬು ಬೆಳೆಗೆ ಬೆಂಬಲ ಬೆಲೆ ನೀಡುವಂತೆ ರೈತ ಸಂಘಟನೆ ಪ್ರತಿಭಟನೆಗೆ ಕರೆ ನೀಡಿದೆ. ಅಷ್ಟೇ ಅಲ್ಲದೆ ಪಂಚಮಸಾಲಿ ಸಮುದಾಯ ಕಳೆದ ಅಧಿವೇಶನದಲ್ಲಿ ಉಂಟಾದ ಲಾಠಿ ಚಾರ್ಜ್ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದು ಸರಕಾರಕ್ಕೆ ಸವಾಲಾಗಿದೆ.
*
ಬೃಹತ್ ಪ್ರತಿಭಟನೆಗೆ ಸಜ್ಜಾದ ಬಿಜೆಪಿ ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಡಿ. ೯ ರಂದು ಬೃಹತ್ ಪ್ರತಿಭಟನೆ ನಡೆಸಲು ರಾಜ್ಯ ಬಿಜೆಪಿ ನಾಯಕರು ಸಜ್ಜಾಗಿದ್ದಾರೆ. ಯಡಿಯೂರಪ್ಪ ಮಾರ್ಗದಲ್ಲಿರುವ ಮಾಲಿನಿ ಸಿಟಿಯಲ್ಲಿ ಪ್ರತಿಭಟನೆ ಆಯೋಜಿಸಲಾಗಿದ್ದು ಪರಿಷತ್ ಸದಸ್ಯ ಎನ್. ರವಿಕುಮಾರ್ ನೇತೃತ್ವದ ತಂಡ ಭಾನುವಾರ ಸಂಜೆ ಸ್ಥಳ ಪರಿಶೀಲನೆ ನಡೆಸಿದರು.
*
ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ದೃಷ್ಟಿಯಿಂದ ಎಲ್ಲರೂ ರಾಜಕಾರಣ ಬದಿಗಿಟ್ಟು ಚರ್ಚೆ ಯಲ್ಲಿ ಪಾಲ್ಗೊಳ್ಳಬೇಕು. ಬಿಜೆಪಿ ನಾಯಕರಿಗೆ ರೈತರ ಬಗ್ಗೆ ಮಾತನಾಡುವ ನೈತಿಕ ಹಕ್ಕು ಇಲ್ಲ. ರೈತರ ಮೇಲೆ ಬಿಜೆಪಿ ದೌರ್ಜನ್ಯ ಮಾಡುತ್ತಾ ಬಂದಿದೆ. ನಮ್ಮ ಸರಕಾರ ಯಾವಾಗಲೂ ರೈತಪರ ವಾಗಿದ್ದು ಅಧಿವೇಶನ ಸಂದರ್ಭದಲ್ಲಿ ಸಮಗ್ರ ಅಭಿವೃದ್ಧಿಗೆ ಚಿಂತನೆ ಮಾಡಲಾಗುತ್ತದೆ.
-ಲಕ್ಷ್ಮೀ ಹೆಬ್ಬಾಳ್ಕರ್ ಸಚಿವೆ