ವೈದ್ಯಕೀಯ
ಡಾ.ಕರವೀರಪ್ರಭು ಕ್ಯಾಲಕೊಂಡ
ವಿಜ್ಞಾನ ನಾಗಾಲೋಟದಿಂದ ಮುನ್ನಡೆಯುತ್ತಿದೆ. ದಿನ ಬೆಳಗಾದರೆ ಹೊಸ ಹೊಸ ಆವಿಷ್ಕಾರಗಳು ಮನುಕುಲದ ಒಳಿತಿಗಾಗಿ ಬರುತ್ತಿವೆ.
ವಿಶ್ವದಾದ್ಯಂತ ಪ್ರತಿ ವರ್ಷ ಫೆಬ್ರವರಿ 4ರಂದು ವಿಶ್ವ ಕ್ಯಾನ್ಸರ್ ಜಾಗೃತಿ ದಿನವನ್ನಾಗಿ ಆಚರಿಸಲಾಗುತ್ತಿದೆ. ಅಂತಾರಾಷ್ಟ್ರೀಯ ಕ್ಯಾನ್ಸರ್
ತಡೆ ಒಕ್ಕೂಟ ಈ ದಿನಾಚರಣೆಯನ್ನು 2000ದಿಂದ ಜಾರಿಗೆ ತಂದಿದೆ. ಯುನೆಸ್ಕೊ ಮಹಾನಿರ್ದೇಶಕರು, ಫ್ರೆಂಚ್ ಅಧ್ಯಕ್ಷರಾಗಿದ್ದ ಜಾಕ್ಯುಸ್ ಚಿರಾಗ ಪ್ಯಾರಿಸ್‌ನಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಘೋಷಣೆ ಮಾಡಿದರು.
Cancer is that lawful word we all fear when we go to the doctor for a physical exam ,but in that dark moment we hear it the world we live in and the people we share it with begin to illuminate things we did not even pay attention to – B.P.Philips
ಕ್ಯಾನ್ಸರ್ ರೋಗ ಮನುಕುಲದ ದೊಡ್ಡ ಶತ್ರು. ಅನಾದಿಕಾಲದಿಂದಲೂ ಈ ರೋಗ ಮನುಕುಲವನ್ನು ಕಾಡುತ್ತಿದೆ. ಕ್ಯಾನ್ಸರ್ ಎಂದರೆ ಭಯ. ಕ್ಯಾನ್ಸರ್ ಎಂದರೆ ಸಾವು ಎಂಬ ನಂಬಿಕೆಗಳು ಜನರಲ್ಲಿ. ಆದರೆ, ಪರಿಸ್ಥಿತಿ ಈಗ ಸಾಕಷ್ಟು ಬದಲಾಗಿದೆ. ವಿಜ್ಞಾನ ನಾಗಾಲೋಟದಿಂದ ಮುನ್ನಡೆಯು ತ್ತಿದೆ. ದಿನ ಬೆಳಗಾದರೆ ಹೊಸ ಹೊಸ ಆವಿಷ್ಕಾರಗಳು ಮನುಕುಲದ ಒಳಿತಿಗಾಗಿ ಬರುತ್ತಿವೆ. ವಿಶ್ವದಾದ್ಯಂತ ಪ್ರತಿ ವರ್ಷ ಫೆಬ್ರವರಿ 4ರಂದು ವಿಶ್ವ ಕ್ಯಾನ್ಸರ್ ಜಾಗೃತಿ ದಿನವನ್ನಾಗಿ ಆಚರಿಸಲಾಗುತ್ತಿದೆ.
ಅಂತಾರಾಷ್ಟ್ರೀಯ ಕ್ಯಾನ್ಸರ್ ತಡೆ ಒಕ್ಕೂಟ ಈ ದಿನಾಚರಣೆಯನ್ನು 2000ದಿಂದ ಜಾರಿಗೆ ತಂದಿದೆ. ಯುನೆಸ್ಕೊ ಮಹಾನಿರ್ದೇಶಕರು, ಫ್ರೆಂಚ್ ಅಧ್ಯಕ್ಷರಾಗಿದ್ದ ಜಾಕ್ಯುಸ್ ಚಿರಾಗ ಪ್ಯಾರಿಸ್‌ನಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಘೋಷಣೆ ಮಾಡಿದರು. ದಿನೇ ದಿನೇ ಹೆಚ್ಚುತ್ತಿರುವ ಕ್ಯಾನ್ಸರ್ ರೋಗವನ್ನು ತಡೆಗಟ್ಟುವುದರ ಬಗ್ಗೆ, ಆರಂಭಿಕ ಹಂತದಲ್ಲಿ ಗುರುತಿಸುವ ಬಗ್ಗೆ ಮತ್ತು ಲಭ್ಯವಿರುವ ಚಿಕಿತ್ಸೆಗಳ ಬಗ್ಗೆ ಹೆಚ್ಚಿನ ಮಾಹಿತಿ ಹಾಗೂ ಮಾರ್ಗದರ್ಶನ ನೀಡಿ, ಕ್ಯಾನ್ಸರ್ ರೋಗದ ಬಗೆಗಿನ ತಪ್ಪು ಕಲ್ಪನೆಗಳನ್ನು ಹೋಗಲಾಡಿಸುವ ಮಹದಾಸೆಯನ್ನು ಈ ಆಚರಣೆ ಹೊಂದಿದೆ.
ಬಹುತೇಕ ಎಲ್ಲ ಕ್ಯಾನ್ಸರ್‌ಗಳನ್ನು ಆರಂಭಿಕ ಹಂತದಲ್ಲಿಯೇ ಗುರುತಿಸುವ ಪರೀಕ್ಷೆಗಳು ಇಂದು ಲಭ್ಯವಾಗಿವೆ. ಕ್ಯಾನ್ಸರ್ ರೋಗವನ್ನು ಕೂಡಾ
ಗೆಲ್ಲಲು ಸಾಧ್ಯವಿದೆ ಎಂಬ ಧನಾತ್ಮಕ ಸಂದೇಶವನ್ನು ಸಮಾಜಕ್ಕೆ ತಲುಪಿಸುವ ಗುರುತರವಾದ ಗುರಿಯನ್ನು ಈ ವಿಶ್ವ ಕ್ಯಾನ್ಸರ್ ಜಾಗೃತಿ ದಿನಾಚರಣೆ ಹೊಂದಿದೆ. ಕ್ಯಾನ್ಸರ್ ಮರಣಾಂತಿಕ ಕಾಯಿಲೆಗಳ ಪಟ್ಟಿಯಲ್ಲಿ 2ನೆಯ ಅಗ್ರಸ್ಥಾನವನ್ನು (ಮೊದಲನೆ ಸ್ಥಾನ ಹೃದಯಾಘಾತ) ಅಲಂಕರಿಸಿದೆ. ಈ ಭಯಾನಕ ಕಾಯಿಲೆಗೆ ತುತ್ತಾದ ರೋಗಿ ಮಾನಸಿಕವಾಗಿ, ದೈಹಿಕವಾಗಿ ತೀವ್ರವಾಗಿ ಕುಗ್ಗುತ್ತಾನೆ.
ಹಿಂದಿನ ಕಾಲದಲ್ಲಿ ಪರಿಣಿತ ವೈದ್ಯರ ಸೇವೆ, ಅತ್ಯಾಧುನಿಕ ತಂತ್ರಜ್ಞಾನ ದುರ್ಲಭವಾಗಿತ್ತು. ಬಡತನ, ಅನಕ್ಷರತೆ, ಅಜ್ಞಾನ, ಮಡುಗಟ್ಟಿನಿಂತ ಮೂಢನಂಬಿಕೆ, ಮೂಲಭೂತ ಸೌಕರ್ಯಗಳ ಕೊರತೆಯಿಂದಾಗಿ ರೋಗವನ್ನು ಪತ್ತೆ ಹಚ್ಚುವ ಹೊತ್ತಿಗೆ ಪರಿಸ್ಥಿತಿ ಕೈಮೀರಿ ಹೋಗುತ್ತಿತ್ತು. ಈ ಕಾರಣದಿಂದಲೇ ಕ್ಯಾನ್ಸರ್ ಗುಣಪಡಿಸಲಾಗದ ಕಾಯಿಲೆ ಎಂಬ ಹಣೆಪಟ್ಟಿ ಪಡೆದುಕೊಂಡಿತ್ತು. ತಂತ್ರಜ್ಞಾನದ ಕ್ರಾಂತಿ, ಪರಿಣಿತ ವೈದ್ಯರ ಲಭ್ಯತೆ, ಏರಿದ ಜನರ ತಿಳಿವಳಿಕೆ ಮಟ್ಟ ಕ್ಯಾನ್ಸರ್ ರೋಗಕ್ಕೆ ಮಟ್ಟ ಹಾಕಲು ಇಂದು ಸಾಧ್ಯವಾಗಿದೆ.
ಇದು ಗರ್ಭಗೊರಳಿನ ಕ್ಯಾನ್ಸರ್ ವಿಷಯದಲ್ಲಂತೂ ನೂರಕ್ಕೆ ನೂರು ಸತ್ಯ. ಇಂದು ಪ್ರಪಂಚದ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಲ್ಲಷ್ಟೇ ಅಲ್ಲ, ಸಂಪದ್ಭರಿತ ಮುಂದುವರಿದ ರಾಷ್ಟ್ರಗಳಲ್ಲೂ, ಮಾಯವಾಗಿದ್ದ ಸೋಂಕು ರೋಗಗಳ ಪುನರಾಗಮನವಾಗಿ ಅವು ಜನಾರೋಗ್ಯ ಸಮಸ್ಯೆ ಗಳಾಗುವ ಸಂಭವ ಇರುವಂತೆಯೇ, ಇಂದು ಅಸಾಂಕ್ರಾಮಿಕ ರೋಗಗಳ ಅಟ್ಟಹಾಸ ಹೆಚ್ಚುತ್ತಿದೆ. ಸಾಕಷ್ಟು ಸಾವು ನೋವುಗಳು ಸಂಭವಿಸುತ್ತಿವೆ.
ಕ್ಯಾನ್ಸರ್ ರೋಗದ ವಿರುದ್ಧದ ಲಸಿಕೆಯ ಬಳಕೆಯಲ್ಲಿ ಕಂಡು ಬಂದಿರುವ ಯಶಸ್ಸು ಕಡಿಮೆ ಪ್ರಮಾಣ zದರೂ, ಪ್ರಯತ್ನಗಳು ಅವ್ಯಾಹತವಾಗಿ
ಮುಂದುವರೆದಿವೆ. ಇಂದು ಗರ್ಭಗೊರಳಿನ ಕ್ಯಾನ್ಸರ್ ಗೆ ಕಡಿವಾಣ ಹಾಕುವ ಲಸಿಕೆ ಲಭ್ಯವಾಗಿದೆ.
ಎಚ್.ಪಿ.ವಿ. ಮೂಲಕ ಗರ್ಭಗೊರಳಿನ ಕ್ಯಾನ್ಸರ್ ಉಂಟುಮಾಡುವ ಸೋಂಕನ್ನು ತಡೆಯಲು ಒಂದು ಲಸಿಕೆಯನ್ನು ಅಭಿವೃದ್ಧಿಪಡಿಸಲಾಗಿದೆ.
ಬಹಳಷ್ಟು ಕ್ಯಾನ್ಸರ್‌ಗಳಂತೆ ಗರ್ಭಕೋಶದ ಕ್ಯಾನ್ಸರ್ ಪತ್ತೆಯಾಗುವವರೆಗೂ ಯಾವುದೇ ಸೂಚನೆ ಗಳನ್ನು ನೀಡುವುದಿಲ್ಲ. ಮಹಿಳೆಯರನ್ನು ಹೆಚ್ಚು
ಕಾಡುವ ಕ್ಯಾನ್ಸರ್‌ಗಳಲ್ಲಿ ಇದು ನಾಲ್ಕನೆಯ ಸ್ಥಾನದಲ್ಲಿದೆ. ಶೇ.99ರಷ್ಟು ಪ್ರಕಣಗಳಲ್ಲಿ ಲೈಂಗಿಕ ಸಂಪರ್ಕದಿಂದ ಹರಡುವ ಎಚ್.ಪಿ.ವಿ. (ಹ್ಯೂಮನ್ ಪ್ಯಾಪಿಲೋಮ ವೈರಸ್)ನಿಂದ ಈ ಕ್ಯಾನ್ಸರ್ ಉಂಟಾಗುತ್ತದೆ.
ಕಿಬ್ಬೊಟ್ಟೆಯಲ್ಲಿ ನೋವು, ಯೋನಿಯ ಮೂಲಕ ಸತತ ನೀರಿನಂತಹ ಸೋರಿಕೆ, ಕಂದು ಅಥವಾ ಕೆಂಪು ಬಣ್ಣದ್ದಿರಬಹುದು. ಕೆಲವೊಮ್ಮೆ ಕೆಟ್ಟ ವಾಸನೆ ಬರಬಹುದು. ಋತುಚಕ್ರಗಳ ನಡುವೆ ಅಸಹಜ ರಕ್ತಸ್ರಾವ, ಸಂಭೋಗದ ಸಂದರ್ಭ ಅಥವಾ ನಂತರ ರಕ್ತಸ್ರಾವ ಸಂಭವಿಸಬಹುದು. ಅಲ್ಲದೆ ಹರ್ಪಿಸ್ ಅಥವಾ ಎಚ್.ಪಿ.ವಿ.ನಂತರ ಉಂಟಾಗುವ ಸೋಂಕು ಗರ್ಭಗೊರಳಿನ ಕ್ಯಾನ್ಸರ್‌ಗೆ ಕಾರಣವಾಗಬಹುದು. ಇಂತಹ ಮುನ್ಸೂಚನೆಗಳು ಕಂಡುಬಂದ ಸೀಯರಿಗೆ ಎಚ್.ಪಿ.ವಿ. ಡಿಎನ್‌ಎ ಪರೀಕ್ಷೆ ನಡೆಸಿದರೆ ಈ ರೋಗದ ಬೆಳವಣಿಗೆ ಕುರಿತು ವಿಶ್ವಾಸಾರ್ಹ ಮಾಹಿತಿ ದೊರೆಯುತ್ತದೆ.
ಗರ್ಭಗೊರಳಿನ ಕ್ಯಾನ್ಸರ್ ಶಸಚಿಕಿತ್ಸೆ ಅಥವಾ ಕಿಮೊ – ರೇಡಿಯೋ ಥೆರಪಿಗಳಿಲ್ಲದೆ ನಿಯಂತ್ರಿಸ ಬಹುದಾದ ರೋಗವಾಗಿದೆ. ಪ್ರಾಥಮಿಕ ನಿಯಂತ್ರಣ ಕ್ರಮಗಳೆಂದರೆ ವ್ಯಾಕ್ಸಿನೇಶನ್ ಮತ್ತು ಸಾಮಾಜಿಕ ಶಿಕ್ಷಣ, ಎಚ್.ಪಿ.ವಿ. ಸೋಂಕಿಗೆ ತೆರೆದುಕೊಳ್ಳುವ ಸಾಧ್ಯತೆ ಕಡಿಮೆಗೊಳಿಸುವುದು ಮತ್ತು ಲೈಂಗಿಕವಾಗಿ ಹರಡುವ ರೋಗಗಳನ್ನು ಕಾಂಡೋಮ್ ಬಳಕೆಯಿಂದ ತಡೆಯುವುದು. ಆದರೆ, ಕಾಂಡೋಮ್ ಬಳಕೆ ಎಚ್.ಪಿ.ವಿ.ಸೋಂಕನ್ನು ಸಂಪೂರ್ಣವಾಗಿ ನಿಯಂತ್ರಿಸುವುದಿಲ್ಲ.
ರೋಗ ವೃದ್ಧಿಯಾಗುವ ಮುನ್ನ ಚಿಕಿತ್ಸೆ ಪಡೆಯುವುದು. ಅದಕ್ಕೆ ಸರ್ವೈಕಲ್ ಸೈಟಾಲಾಜಿ ಅಥವಾ ಎಚ್.ಪಿ.ವಿ.ಪರೀಕ್ಷೆ ರೋಗ ನಿರ್ಧರಿಸಲು ಅಗತ್ಯ.
ಭಾರತದಲ್ಲಿ ಗರ್ಭಗೊರಳಿನ ಕ್ಯಾನ್ಸರ್‌ನಿಂದ ಉಂಟಾಗುವ ಮರಣ ಸಂಖ್ಯೆ ಕಳೆದ ಹತ್ತು ವರ್ಷಗಳಿಂದ ಕಡಿಮೆಯಾಗಿದೆ. ಇದಕ್ಕೆ ಮುಖ್ಯ
ಕಾರಣ ಕ್ಯಾನ್ಸರ್ ಪೂರ್ವ ಹಂತದಲ್ಲಿ ಗರ್ಭಗೊರಳಿನ ಪರೀಕ್ಷೆ ನಡೆಸಿ ಅದರಲ್ಲಿ ಆಗುವ ಬದಲಾವಣೆಗಳನ್ನು ಪತ್ತೆ ಮಾಡುತ್ತಿರುವುದು. ಅಸಹಜ ಜೀವಕೋಶಗಳನ್ನು ಮುಂಚೆಯೇ ಪತ್ತೆ ಮಾಡಿದರೆ ಕ್ಯಾನ್ಸರ್ ನಿಯಂತ್ರಣ ಅಥವಾ ಚಿಕಿತ್ಸೆ ನೀಡಬಹುದು.
ಎಚ್.ಪಿ.ವಿ. ವಿರುದ್ಧ ಲಸಿಕೆ ನೀಡುವ ಕಾರ್ಯಕ್ರಮ ಆರಂಭವಾಗಿದ್ದರೂ, ರೋಗ ಪರೀಕ್ಷೆ ಬಹಳ ಮುಖ್ಯವಾದದ್ದು ಎಂಬುದನ್ನು ಮರೆಯು ವಂತಿಲ್ಲ. ಈಗಿನ ಅಂದಾಜಿನ ಪ್ರಕಾರ, ಪ್ರತಿವರ್ಷ 132082 ಮಹಿಳೆಯರಲ್ಲಿ ಗರ್ಭಗೊರಳಿನ ಕ್ಯಾನ್ಸರ್ ಪತ್ತೆಯಾಗುತ್ತಿದೆ. 74118 ಮಹಿಳೆಯರು ಈ ಕಾಯಿಲೆಯಿಂದ ಸಾಯುತ್ತಿದ್ದಾರೆ. ಭಾರತದಲ್ಲಿ ಮಹಿಳೆಯರಿಗೆ ಗರ್ಭಗೊರಳಿನ ಕ್ಯಾನ್ಸರ್ ಬರುವ ಅಪಾಯ ಶೇ.2.4ರಷ್ಟಿದೆ. ವಿಶ್ವದಲ್ಲಿ ಈ ಪ್ರಮಾಣ ಶೇ.1.3 .ಶೇ.84ರಷ್ಟು ಗರ್ಭಗೊರಳಿನ ಕ್ಯಾನ್ಸರ್ ರೋಗಿಗಳು 34-64 ವಯೋಮಾನದವರು.
ದಕ್ಷಿಣ ಏಷ್ಯಾದಲ್ಲಿ ಪ್ರತಿ ಒಂದು ಗಂಟೆಗೆ ಈ ಕ್ಯಾನ್ಸರ್ ನಿಂದ ಸಾಯುತ್ತಿರುವ ಪ್ರತಿ 10 ಮಹಿಳೆಯರಲ್ಲಿ 8 ಮಂದಿ ಭಾರತಕ್ಕೆ ಸೇರಿದವರಾಗಿರುತ್ತಾರೆ ಎಂಬುದು ಹೆಚ್ಚು ಆತಂಕಕಾರಿ. ಬಹುತೇಕ ಗರ್ಭಗೊರಳಿನ ಕ್ಯಾನ್ಸರಿಗೆ ಎಚ್.ಪಿ.ವಿ. ಕಾರಣ. ಮಾನವರ ದೇಹದಲ್ಲಿ ಎಚ್.ಪಿ.ವಿ ಇದ್ದೇ ಇರುತ್ತದೆ. ಎಚ್.ಪಿ.ವಿಯ 16 ಹಾಗೂ 18 ನೇ ಮಾದರಿ ಶೇ.70ರಷ್ಟು ಈ ಕ್ಯಾನ್ಸರ್ ಪ್ರಕರಣಗಳಿಗೆ ಮೂಲ ಕಾರಣ. ಜೀವಕ್ಕೆ ಬೆದರಿಕೆ ಒಡ್ಡುವ ಕಾಯಿಲೆ ಇದು. ಭಾರತದಲ್ಲಿ ಮಹಿಳೆ ಯರಿಗೆ ಬರುವ ಕ್ಯಾನ್ಸರ್‌ಗಳಲ್ಲಿ ಇದಕ್ಕೆ ಪ್ರಥಮ ಸ್ಥಾನ. ಆದರೆ ಸ್ತನ ಕ್ಯಾನ್ಸರ್ ಬಗ್ಗೆ ಹೆಚ್ಚಿನ ಪ್ರಚಾರ ಇದೆ. ಗರ್ಭಗೊರಳಿನ ಕ್ಯಾನ್ಸರ್ ಬಗ್ಗೆ ಹೆಚ್ಚಿನಪ್ರಚಾರ ಇಲ್ಲ.
ಹೀಗಾಗಿ ಭಾರತದಲ್ಲಿ ಹೆಚ್ಚಿನ ಮಹಿಳೆಯರಿಗೆ ಈ ಬಗ್ಗೆ ಅರಿವಿರುವುದೇ ಇಲ್ಲ. ಆಸ್ಪತ್ರೆಗೆ ಬರುವ ವೇಳೆಗೆ ತಡವಾಗಿ ಹೋಗಿರುತ್ತದೆ. ಬದುಕಿಸುವುದು ಕಷ್ಟ ಎನ್ನುವ ಹಂತದಲ್ಲಿ ಇರುತ್ತಾರೆ. ಈಗ ಈ ಕ್ಯಾನ್ಸರ್‌ಗೆ ಲಸಿಕೆ ಬಂದಿದೆ. ಅಮೆರಿಕ, ಯುರೋಪ್ ಹಾಗೂ ಕೆಲವು ಏಷ್ಯನ್ ರಾಷ್ಟ್ರಗಳಲ್ಲೂ
ಈ ಲಸಿಕೆ ಪ್ರಚಲಿತವಿದೆ. ಈ ಲಸಿಕೆ ಭಾರತದ ಮಾರುಕಟ್ಟೆಯನ್ನೂ ಪ್ರವೇಶಿಸಿದೆ. ಹುಡುಗಿಗೆ 9 ವರ್ಷದ ನಂತರ ಈ ಲಸಿಕೆ ನೀಡಬಹುದು. 6 ತಿಂಗಳ
ಅವಧಿಯಲ್ಲಿ 3 ಡೋಸ್‌ಗಳಲ್ಲಿ ಈ ಲಸಿಕೆ ನೀಡಲಾಗುತ್ತದೆ.
ಲೈಂಗಿಕ ಚಟುವಟಿಕೆ ಆರಂಭಕ್ಕೆ ಮುಂಚೆ ನೀಡಿದರೆ ಇದು ಹೆಚ್ಚು ಪರಿಣಾಮಕಾರಿ ಎಂದು ಸ್ತ್ರೀರೋಗ ತಜ್ಞರು ಹೇಳುತ್ತಾರೆ. ಲಸಿಕೆ ಹಾಕಿಸಿ
ಕೊಂಡರೂ, ಮಹಿಳೆಯರು ಪ್ಯಾಪ್ ಸ್ಮಿಯರ್/ ಎಚ್ .ಪಿ.ವಿ – ಡಿಎನ್‌ಎ ಪರೀಕ್ಷೆಗೆ ಒಳಗಾಗಬೇಕಾಗುತ್ತದೆ. ಪ್ಯಪ್ ಸ್ಮಿಯರ್ ಪರೀಕ್ಷೆಯನ್ನು 21 ವರ್ಷಕ್ಕಿಂತ ಮೇಲ್ಪಟ್ಟ, ಲೈಂಗಿಕವಾಗಿ ಸಕ್ರಿಯವಾಗಿ ಇರುವ ಮಹಿಳೆಯರಲ್ಲಿ ಪ್ರತಿ ಮೂರು ವರ್ಷಗಳಿಗೆ ಒಮ್ಮೆ 65 ವರ್ಷ ವಯಸ್ಸಿನವರೆಗೂ ಮಾಡಿಸಬೇಕಾಗುತ್ತದೆ.
ಇದೇ ರೀತಿ 5 ವರ್ಷಗಳಿಗೊಮ್ಮೆ ಎಚ್.ಪಿ.ವಿ- ಡಿಎನ್‌ಎ ಪರೀಕ್ಷೆ ಸಹ ಮಾಡಿಸಬಹುದು. ಕ್ಯಾನ್ಸರ್ ಈಗ ಗೆಲ್ಲುವ ಕಾಯಿಲೆಯಾಗುತ್ತಿದೆ. ಮೊದಲ ಹಜ್ಜೆಯಾಗಿ ಗರ್ಭಗೊರಳಿನ ಕ್ಯಾನ್ಸರಿಗೆ ಲಸಿಕೆ ಬಂದಿದೆ. ಮುಂಬರುವ ದಿನಗಳಲ್ಲಿ ವೈದ್ಯ ವಿಜ್ಞಾನಿಗಳ ಪರಿಶ್ರಮದಿಂದ ಎಲ್ಲಾ ಕ್ಯಾನ್ಸರಿಗೂ
ಕಡಿವಾಣ ಹಾಕಲು ಸಾಧ್ಯವಾಗಬಹುದು.
I AM and I will ಈ ವರ್ಷದ ವಿಶ್ವ ಕ್ಯಾನ್ಸರ್ ದಿನದ ಘೋಷವಾಕ್ಯ. ಎಲ್ಲರೂ ಕೈ ಜೋಡಿಸೋಣ. ಕ್ಯಾನ್ಸರ್ ಕಟ್ಟಿ ಹಾಕೋಣ. Cancer may have started the fight ,but I will finish it ಎಂಬ ಜೋಸೆಫ್ ಕ್ಯಾಂಪೆಲ್‌ರ ಅರ್ಥಪೂರ್ಣ ಮಾತು ನಮಗೆಲ್ಲ ಸೂರ್ತಿ ನೀಡಲಿ. ಅಂತಿಮ ಜಯ
ಮನುಕುಲದ್ದಾಗಲಿ.