Friday, 10th January 2025

UP Horror : ಮೂರು ಮಕ್ಕಳು ಸೇರಿ ಒಂದೇ ಕುಟುಂಬದ ಐವರ ಬರ್ಬರ ಹತ್ಯೆ! ಹಳೆಯ ದ್ವೇಷಕ್ಕೆ ನಡೀತಾ ಕೊಲೆ?

UP Horror

ಲಖನೌ: ಉತ್ತರ ಪ್ರದೇಶದಲ್ಲಿ (Uttar Pradesh) ದುರ್ಘಟನೆಯೊಂದು ನಡೆದಿದ್ದು, ಒಂದೇ ಕುಟುಂಬದ ಐವರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಮೀರತ್‌ನ ಲಿಸಾರಿ ಗೇಟ್‌ನ ಮನೆಯೊಂದರಲ್ಲಿ ದಂಪತಿ ಹಾಗೂ ಅವರ ಮೂರು ಹೆಣ್ಣು ಮಕ್ಕಳ ಶವ ಪತ್ತೆಯಾಗಿದೆ. ದಂಪತಿಯ ಶವ ನೆಲದ ಮೇಲೆ ಪತ್ತೆಯಾಗಿದ್ದರೆ, ಮಕ್ಕಳ ಶವಗಳು ಹಾಸಿಗೆಯ ಮೇಲೆ ಪತ್ತೆಯಾಗಿವೆ. (UP Horror)

ಬುಧವಾರ ಸಂಜೆಯಿಂದ ಕುಟುಂಬದವರು ಕಾಣಲಿಲ್ಲ ಎಂದು ನೆರೆಹೊರೆಯವರು ಗಮನಿಸಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಅಧಿಕಾರಿಗಳಿಗೆ ಮನೆಗೆ ಹೊರಗಿನಿಂದ ಬೀಗ ಹಾಕಿರುವುದು ಕಂಡು ಬಸ್ಥಳಕ್ಕೆ ಬಂದ ಅಧಿಕಾರಿಗಳು ಮನೆಗೆ ಹೊರಗಿನಿಂದ ಬೀಗ ಹಾಕಿರುವುದು ಕಂಡುಬಂದಿದೆ. ನಂತರ ಛಾವಣಿ ಬಳಸಿ ಮನೆಯೊಳಗೆ ಪ್ರವೇಶಿಸಿದಾಗ ಕುಟುಂಬಸ್ಥರು ಮೃತ ಪಟ್ಟಿರುವುದು ಕಂಡು ಬಂದಿದೆ. ದಂಪತಿಯ ದೇಹ ನೆಲದ ಮೇಲೆ ಪತ್ತೆಯಾಗಿದ್ದರೆ, ಮಕ್ಕಳ ದೇಹ ಹಾಸಿಗೆಯಲ್ಲಿ ಪತ್ತೆಯಾಗಿದೆ.

ಎಲ್ಲಾ ದೇಹಗಳಿಗೆ ತಲೆಗೆ ಗಾಯಗಳಾಗಿದ್ದು, ಭಾರವಾದ ವಸ್ತುವಿನಿಂದ ಹೊಡೆದಂತೆ ಕಂಡುಬಂದಿದೆ ಎಂದು ಪೊಲೀಸರು ಹೇಳಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ಸಾವಿಗೆ ನಿಖರ ಕಾರಣ ತಿಳಿಯಲಿದೆ.ಪ್ರಾಥಮಿಕ ಅವಲೋಕನಗಳ ಆಧಾರದ ಮೇಲೆ ಇದು ವೈಯಕ್ತಿಕ ದ್ವೇಷದಿಂದ ನಡೆದ ಕೊಲೆ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ. ಹಿರಿಯ ಅಧಿಕಾರಿಗಳು ಸ್ಥಳದಲ್ಲಿ ಹಾಜರಿದ್ದು, ತನಿಖೆ ಚುರುಕುಗೊಂಡಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

ಫೋರೆನ್ಸಿಕ್ ತಂಡಗಳು ಮನೆಯನ್ನು ಪರಿಶೀಲಿಸುತ್ತಿದ್ದು, ತನಿಖೆ ನಡೆಸಲಾಗುತ್ತಿದೆ.

ಪ್ರತ್ಯೇಕ ಘಟನೆಯಲ್ಲಿ ಮಧ್ಯಪ್ರದೇಶದ ದೇವಾಸ್ ಜಿಲ್ಲೆಯಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ನಯಾಪುರ ಪ್ರದೇಶದಲ್ಲಿ ಡಿ 21ರಂದು ಬೆಳಗ್ಗೆ ಮನೆಯೊಂದರಲ್ಲಿ ಸಂಭವಿಸಿದ ಭಾರಿ ಅಗ್ನಿ ಅವಘಡದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ ಈ ಘಟನೆ ಬೆಳಗಿನ ಜಾವ 4.30ಕ್ಕೆ ನಡೆದಿದೆ. ಅಪಘಡದಲ್ಲಿ ಮೃತಪಟ್ಟ ನಾಲ್ವರು ಒಂದೇ ಕುಟುಂಬದವರಾಗಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ದೊರೆತ ತಕ್ಷಣ ದೇವಾಸ್ ಮುನ್ಸಿಪಲ್ ಕಾರ್ಪೊರೇಷನ್‌ನ ಅಗ್ನಿಶಾಮಕ ದಳದ ಮೂರು ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಸಾಕಷ್ಟು ಪ್ರಯತ್ನದ ನಂತರ ಬೆಂಕಿಯನ್ನು ಹತೋಟಿಗೆ ತರಲಾಗಿದೆ. ಮನೆಯಲ್ಲಿ ವಾಸಿಸುತ್ತಿದ್ದ ಪತಿ, ಪತ್ನಿ ಹಾಗೂ ಇಬ್ಬರು ಮಕ್ಕಳು ಬೆಂಕಿ ಅವಘಡಕ್ಕೆ ಮೃತಪಟ್ಟಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ತಕ್ಷಣ ಜಿಲ್ಲಾಡಳಿತ ತಂಡಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿ ಪುನೀತ್ ಗೆಹ್ಲೋಡ್ ಸ್ಥಳಕ್ಕೆ ಧಾವಿಸಿದ್ದರು. ಅಷ್ಟರಲ್ಲಾಗಲೇ ಒಳಗಿದ್ದವರು ಮೃತಪಟ್ಟಿದ್ದರು.

ಈ ಸುದ್ದಿಯನ್ನೂ ಓದಿ : Fire Accident: ರೈಲು ನಿಲ್ದಾಣ ಬಳಿ ಬೆಂಕಿ ಅವಘಡ; ಸುಟ್ಟು ಕರಕಲಾಯ್ತು 200 ದ್ವಿಚಕ್ರ ವಾಹನ

Leave a Reply

Your email address will not be published. Required fields are marked *