Tuesday, 9th August 2022

ಹುಬ್ಬಳ್ಳಿ ಗಲಭೆ ಪ್ರಕರಣ: ಮತ್ತೆ 8 ಆರೋಪಿಗಳ ಬಂಧನ

ಹುಬ್ಬಳ್ಳಿ : ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮತ್ತೆ 8 ಆರೋಪಿಗಳನ್ನು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ 154 ಕ್ಕೆ ಏರಿಕೆಯಾಗಿದೆ.

ಪ್ರಕರಣ ಸಂಬಂಧ ಈಗಾಗಲೇ ಪೊಲೀಸರು ಬಂಧಿಸಿರುವ ಆರೋಪಿಗಳ ನೀಡಿರುವ ಸುಳಿವಿನ ಮೇರೆಗೆ ತಲೆಮರೆಸಿಕೊಂಡಿದ್ದ 8 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ಕೈಗೊಂಡಿದ್ದಾರೆ.

ಪ್ರಕರಣದ ಪ್ರಮುಖ ಆರೋಪಿ ಎನ್ನಲಾದ ವಸೀಂ ಪಠಾಣ್‍ನನ್ನು ಗೌಪ್ಯ ಸ್ಥಳಕ್ಕೆ ಕರೆದೊಯ್ದು ತೀವ್ರ ವಿಚಾರಣೆ ನಡೆಸಲಾಗು ತ್ತಿದ್ದು, ಆರೋಪಿಗಳಾದ ನಾಸೀರ್ ಅಹಮ್ಮದ್ ಹೊನ್ಯಾಳ, ಆರೀಫ್ ರನ್ನು ವಿಚಾರಣೆಗೆ ಪೊಲೀಸ್ ವಶಕ್ಕೆ ಪಡೆಯಲಾಗಿದೆ.