Thursday, 1st December 2022

ಪಾಕಿಸ್ತಾನ ಜಯವನ್ನು ಸಂಭ್ರಮಿಸಿದರೆ ದೇಶದ್ರೋಹ ಪ್ರಕರಣ: ಯೋಗಿ ಎಚ್ಚರಿಕೆ

ಲಖನೌ: ಪಾಕಿಸ್ತಾನದ ವಿರುದ್ಧ ಭಾರತ ಸೋತ ನಂತರ ದೇಶದಲ್ಲಿ ಪಾಕ್‌ ಜಯದ ಸಂಭ್ರಮಾ ಚರಣೆ ನಡೆದ ಬಗ್ಗೆ ವರದಿಯಾಗುತ್ತಿರುವ ಬೆನ್ನಲ್ಲೇ ಇಂಥ ವರ್ತನೆಗಳ ವಿರುದ್ಧ ದೇಶದ್ರೋಹ ಕಾನೂನು ಪ್ರಯೋಗಿಸುವ ಎಚ್ಚರಿಕೆಯನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್‌ ಗುರುವಾರ ಟ್ವೀಟ್‌ ಮಾಡಿದ್ದಾರೆ.

ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ಮೊದಲ ಬಾರಿಗೆ ಪಾಕಿಸ್ತಾನದ ಎದುರು ಪರಾಭವ ಕಂಡಿತ್ತು.

ಕ್ರಿಕೆಟ್‌ ಪಂದ್ಯಾವಳಿಯ ನಂತರ ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಸಂದೇಶ ಗಳನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ಮತ್ತು ದೇಶ ವಿರೋಧಿ ಘೋಷಣೆ ಕೂಗಿದ ಆರೋಪದ ಮೇಲೆ ರಾಜಸ್ಥಾನದ ಉದಯಪುರದ ಖಾಸಗಿ ಶಾಲೆಯ ಶಿಕ್ಷಕ ಮತ್ತು ಉತ್ತರ ಪ್ರದೇಶದ ಆಗ್ರಾದಲ್ಲಿ ಓದುತ್ತಿರುವ ಕಾಶ್ಮೀರದ ಮೂವರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ಬುಧವಾರ ಬಂಧಿಸಲಾಗಿದೆ.

ದೇಶದ ವಿರುದ್ಧ ಟೀಕೆ ಮಾಡಿದ್ದಕ್ಕಾಗಿ ಆಗ್ರಾ, ಬರೇಲಿ, ಬದೌನ್ ಮತ್ತು ಸೀತಾಪುರ ಜಿಲ್ಲೆ ಗಳಲ್ಲಿ ಐದು ಪ್ರಕರಣಗಳಲ್ಲಿ ಏಳು ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.