ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ, ಯುಟ್ಯೂಬ್ ಸ್ಟಾರ್ ಮೈಲಾರಿ ಮೇಲೆ ಕೇಸ್
ಬೆಳಗಾವಿ ಜಿಲ್ಲೆಯ ಗ್ರಾಮವೊಂದರಲ್ಲಿ ಹನುಮಂತ ದೇವರ ಓಕುಳಿ ಪ್ರಯುಕ್ತ ಆಯೋಜಿಸಿದ್ದ ಆರ್ಕೆಸ್ಟ್ರಾ ಕಾರ್ಯಕ್ರಮದಲ್ಲಿ ಹಾಡಲು ಮ್ಯೂಸಿಕ್ ಮೈಲಾರಿ ಆಗಮಿಸಿದ್ದ. ಇದೇ ಆರ್ಕೆಸ್ಟ್ರಾದಲ್ಲಿ ಅಪ್ರಾಪ್ತ ಬಾಲಕಿ ಡ್ಯಾನ್ಸ್ ಮಾಡಲು ಬಂದಿದ್ದಳು ಎನ್ನಲಾಗಿದೆ. ಕಾರ್ಯಕ್ರಮದ ವೇಳೆ ಲಾಡ್ಜ್‌ಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಬಾಲಕಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾಳೆ.